ಕುಂದಗೋಳ : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ತಾಲೂಕು ಘಟಕ ಕುಂದಗೋಳ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಇವರುಗಳ ನೇತೃತ್ವದಲ್ಲಿ 10ನೇ ತರಗತಿಯಲ್ಲಿ ಅತಿ ಹೆಚ್ಚಿನ ಅಂಕಿ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವನ್ನು ಕುಂದಗೋಳ ಪಟ್ಟಣದಲ್ಲಿ ಏರ್ಪಡಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎನ್.ಮಠಪತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳ ಸಾಧನೆಗೆ ಬೆಂಬಲ ಪ್ರೋತ್ಸಾಹ ತುಂಬುವ ನಿಟ್ಟಿನಲ್ಲಿ ಈ ತರಹ ಅಭಿನಂದನಾ ಸಮಾರಂಭ ಬಹು ಮುಖ್ಯ ಎಂದರು, ಬಳಿಕ ಕುಂದಗೋಳ ತಾಲೂಕಿನಲ್ಲಿ ಪ್ರೌಢ ಶಾಲೆಗಳಲ್ಲಿ ಅಭ್ಯಾಸ ಮಾಡಿ ಅತಿ ಹೆಚ್ಚು ಅಂಕ ಪಡೆದ 11 ವಿದ್ಯಾರ್ಥಿಗಳನ್ನು ಸನ್ಮಾನಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಪ.ಪಂ ಅಧ್ಯಕ್ಷ ಪ್ರಕಾಶ ವಿ ಕೋಕಾಟೆ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎನ್.ಮಠಪತಿ ಕ್ಷೇತ್ರ ಸಮನ್ವಯ ಅಧಿಕಾರಿ ರುದ್ರಪ್ಪ ಭಜಂತ್ರಿ, ಮ.ಸಾ.ಪ ಜಿಲ್ಲಾಧ್ಯಕ್ಷ ಸಂಜೀವ ದುಮಕನಾಳ, ಎಂ ಎಂ ಘೋಡಕೆ ಅಧ್ಯಕ್ಷರು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಹಾಗೂ ಪ್ರೌಢ ಶಾಲಾ ಶಿಕ್ಷಕರು ಮತ್ತು ಮುದ್ದು ಮಕ್ಕಳು ಉಪಸ್ಥಿತರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು.
Kshetra Samachara
06/06/2022 12:28 pm