ಧಾರವಾಡ: ಉನ್ನತ ಶಿಕ್ಷಣವು ಏಕ್ ಭಾರತ, ಶ್ರೇಷ್ಠ ಭಾರತ ಹಾಗೂ ಆತ್ಮನಿರ್ಭರ ಭಾರತ ನಿರ್ಮಿಸಲು ಪೂರಕವಾಗಬೇಕು. ಪದವೀಧರರು ದೇಶದ ಜನಸಾಮಾನ್ಯರ ಬದುಕಿನ ವಿಕಾಸಕ್ಕೆ ಕೊಡುಗೆಗಳನ್ನು ನೀಡಬೇಕು ಎಂದು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಹೇಳಿದರು.
ಧಾರವಾಡ ಕರ್ನಾಟಕ ವಿಶ್ವ ವಿದ್ಯಾಲಯದ ಗಾಂಧಿ ಭವನದಲ್ಲಿ ನಡೆದ 72ನೇ ವಾರ್ಷಿಕ ಘಟಿಕೋತ್ಸವದ ಅಧ್ಯಕ್ಷತೆ ಅವರು ಮಾತನಾಡಿದರು.
ಕರ್ನಾಟಕ ವಿಶ್ವವಿದ್ಯಾಲಯವು 73 ವರ್ಷಗಳಿಗೂ ಅಧಿಕ ಕಾಲದಿಂದ ಶಿಕ್ಷಣ ಹಾಗೂ ದೇಶದ ವಿಕಾಸಕ್ಕೆ ತನ್ನ ಕೊಡುಗೆಗಳನ್ನು ನೀಡಿದೆ. ಇಲ್ಲಿ ವ್ಯಾಸಂಗ ಮಾಡಿದ ಅನೇಕರು ಉನ್ನತ ಸಾಧನೆ ಮಾಡಿದ್ದಾರೆ. ನಾವು ನಮ್ಮ ಕ್ಷೇತ್ರಗಳಲ್ಲಿ ಉತ್ತಮ ಕಾರ್ಯ ಮಾಡಿ ಜನಸಾಮಾನ್ಯರ ಬದುಕಿನ ಏಳ್ಗೆಗೆ ಕಾರಣರಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ನವದೆಹಲಿಯ ಇಂಟರ್ ನ್ಯಾಷನಲ್ ಸೆಂಟರ್ ಫಾರ್ ಜೆನೆಟಿಕ್ ಎಂಜಿನಿಯರಿಂಗ್ ಮತ್ತು ಬಯೋಟೆಕ್ನಾಲಜಿ ನಿರ್ದೇಶಕ ಡಾ.ದಿನಕರ ಸಾಳುಂಕೆ ಮಾತನಾಡಿ, ಜೈವಿಕ ತಂತ್ರಜ್ಞಾನ, ಔಷಧಿ, ಪರಮಾಣು ಶಕ್ತಿ, ದೂರ ಸಂಪರ್ಕ, ಬಾಹ್ಯಾಕಾಶ ತಂತ್ರಜ್ಞಾನ, ರಕ್ಷಣಾಭಿವೃದ್ಧಿ, ಆರೋಗ್ಯ ಮತ್ತು ಕೃಷಿ ಕೇತ್ರಗಳಲ್ಲಿನ ಭಾರತದ ಸಾಧನೆಯನ್ನು ವಿಶ್ವವೇ ಗುರುತಿಸಿದೆ. ಮಹತ್ವಾಕಾಂಕ್ಷೆಯ ಮತ್ತು ಸ್ವಾಲಂಭಿ ಭಾರತ ನಿರ್ಮಾಣದಲ್ಲಿ ಯುವ ಸಮುದಾಯ ಮಹತ್ವದ ಪಾತ್ರ ನಿರ್ವಹಿಸಬೇಕಾಗಿದೆ ಎಂದರು.
ಇದೇ ಸಂದರ್ಭದಲ್ಲಿ 147 ಪಿಎಚ್‌ಡಿ, 4 ಎಂ.ಫಿಲ್, 3943 ಸ್ನಾತಕೋತ್ತರ, 17762 ಸ್ನಾತಕ, 26 ಕಾನೂನು,119 ಡಿಪ್ಲೊಮಾ ಹಾಗೂ 27 ಸರ್ಟಿಫಿಕೇಟ್ ಕೋರ್ಸ್‌ಗಳು ಸೇರಿದಂತೆ ಒಟ್ಟು 948 ಜನರಿಗೆ ಖುದ್ದಾಗಿ ಮತ್ತು 21080 ಜನರಿಗೆ ಅನುಪಸ್ಥಿತಿಯಲ್ಲಿ ಪದವಿಗಳನ್ನು ಪ್ರದಾನ ಮಾಡಲಾಯಿತು.
Kshetra Samachara
07/06/2022 07:22 pm