ಹುಬ್ಬಳ್ಳಿ: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದ್ದು,ವಾಣಿಜ್ಯನಗರಿ ಹುಬ್ಬಳ್ಳಿಯ ವಿದ್ಯಾರ್ಥಿನಿ ಮೂರನೇ ರ‍್ಯಾಂಕ್ ಪಡೆಯುವ ಮೂಲಕ ಸಾಧನೆ ಮಾಡಿದ್ದಾಳೆ.
ಹೌದು.. ಹುಬ್ಬಳ್ಳಿಯ ಎಸ್.ಜೆ.ಎಂ.ವಿ.ಎಸ್ ಕಾಲೇಜಿನ ವಿದ್ಯಾರ್ಥಿನಿಗೆ ಮೂರನೇ ರ‍್ಯಾಂಕ್ ಬಂದಿದ್ದು,ಸಾನಿಕಾ ಗುಂಡೂರಾವ್ ಮೂರನೇ ರ‍್ಯಾಂಕ್ ಪಡೆದ ವಿದ್ಯಾರ್ಥಿನಿಯಾಗಿದ್ದಾಳೆ.
593 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಮೂರನೇ ರ‍್ಯಾಂಕ್ ಪಡೆದಿದ್ದು, ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜು ಹಾಗೂ ಕುಟುಂಬಸ್ಥರಲ್ಲಿ ಸಂತೋಷ ಮನೆ ಮಾಡಿದೆ.
Kshetra Samachara
18/06/2022 12:30 pm