ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಮಕ್ಕಳ ಮೇಲೆ ಒತ್ತಡ ಬೇಡ: ಕ್ಲಾಸಿಕ್ ಪಿಯು ಕಾಲೇಜಿನ ಕಾರ್ಯಕ್ರಮದಲ್ಲಿ ಮನಗುಂಡಿ ಶ್ರೀಗಳ ಅಭಿಮತ

ಧಾರವಾಡ: ಮಕ್ಕಳ ಶೈಕ್ಷಣಿಕ ಜೀವನ ಭವಿಷ್ಯದ ಪ್ರಮುಖ ಘಟ್ಟವಾಗಿದ್ದು, ಯಾವುದೇ ಪರಿಸ್ಥಿತಿಯಲ್ಲಿಯೂ ಹೆಚ್ಚು ಅಂಕಗಳಿಗಾಗಿ ಮಕ್ಕಳ ಮೇಲೆ ಒತ್ತಡ ಹಾಕಬೇಡಿ ಎಂದು ಪಾಲಕರಲ್ಲಿ ಮನಗುಂಡಿ ಗುರುಬಸವ ಮಹಾಮನೆಯ ಶ್ರೀ ಬಸವಾನಂದ ಸ್ವಾಮೀಜಿ ಮನವಿ ಮಾಡಿದರು.

ನಗರದ ಕ್ಲಾಸಿಕ್ ಪದವಿ ಪೂರ್ವ ಮಹಾವಿದ್ಯಾಲಯದ ಆವರಣದಲ್ಲಿ ನಡೆದ, ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ವಿಶೇಷ ಸಾಧನೆ ಮಾಡಿರುವ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭದ ಸಾನಿಧ್ಯವಹಿಸಿ ಮಾತನಾಡಿದ ಅವರು, ಮಕ್ಕಳ ಅಭಿರುಚಿ, ಬುದ್ಧಿಮತ್ತೆಗೆ ಅನುಗುಣವಾಗಿ ಅವರ ಸಾಧನೆಗೆ ಬೆಂಬಲ ನೀಡಿ ಪ್ರೋತ್ಸಾಹಿಸಬೇಕು. ಅವರು ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ದಾರಿ ಹಿಡಿಯುವುದು ಸರಿಯಲ್ಲ. ಮರಳಿ ಯತ್ನವ ಮಾಡಿ ಸಾಧಿಸಿರಿ ಎಂದು ಹೇಳಿದರು.

ಅತಿಥಿಗಳಾಗಿದ್ದ ಡಾ. ಎಂ.ವಾಯ್.ಸಾವಂತ ಮಾತನಾಡಿ, ತರಗತಿಯ ಪಾಠಗಳ ಜೊತೆಗೆ ವಿದ್ಯಾರ್ಥಿಗಳು ಕೆಲವೊಂದು ವಿಶೇಷ ಕೌಶಲ್ಯಗಳನ್ನು ಅಳವಡಿಸಿಕೊಂಡು ಸ್ಪರ್ಧಾತ್ಮಕ ಜಗತ್ತಿಗೆ ಅಣಿಗೊಳ್ಳಬೇಕೆಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಕ್ಲಾಸಿಕ್ ಸಮೂಹ ಸಂಸ್ಥೆಗಳ ಹಾಗೂ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ನಿರ್ದೇಶಕರಾದ ಲಕ್ಷ್ಮಣ ಎಸ್. ಉಪ್ಪಾರ ಮಾತನಾಡಿ, ಜ್ಞಾನದ ಹಸಿವು ಇದ್ದಾಗ ಮಾತ್ರ ಸಾಧನೆ ಮಾಡಲು ಸಾಧ್ಯ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶ್ರದ್ಧೆಯಿಂದ ಓದಬೇಕೆಂದು ಹೇಳಿದರು.

ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದ ದ್ವಿತೀಯ ಪಿ.ಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಹಾಗೂ ನೂರಕ್ಕೆ ನೂರು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಪ್ರಾಚಾರ್ಯ ಎಚ್.ಎಂ.ಉಡಿಕೇರಿ ಸ್ವಾಗತಿಸಿದರು. ಉಪನ್ಯಾಸಕರಾದ ಸವಿತಾ ಪಾಟೀಲ, ಪ್ರತಿಭಾ ಹಿರೇಮಠ, ರವಿ ಜೋಸೆಫ್ ಪರಿಚಯಿಸಿದರು. ಬಸವರಾಜ ಕುಪ್ಪಸಗೌಡ್ರ ನಿರೂಪಿಸಿದರು. ಆಶಾ ಚೌಗಲಾ ವಂದಿಸಿದರು.

Edited By : Nagaraj Tulugeri
Kshetra Samachara

Kshetra Samachara

28/06/2022 11:47 am

Cinque Terre

21.17 K

Cinque Terre

0

ಸಂಬಂಧಿತ ಸುದ್ದಿ