ಕುಂದಗೋಳ: ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಶೇ.85 ಕ್ಕಿಂತ ಹೆಚ್ಚು ಅಂಕಗಳಿಸಿದ ತಾಲೂಕಿನ ಹಿಂದೂ ಬಣಜಿಗ ಸಮಾಜದ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕುಂದಗೋಳ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಘದ ಕರ್ನಾಟಕ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಅಂದಾನೆಪ್ಪ ಉಪ್ಪಿನ, ಹಿಂದೂ ಬಣಜಿಗ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದೇ ಜುಲೈ 23 ರಂದು ಬೆಳಿಗ್ಗೆ 10 ಕ್ಕೆ ಸಂಶಿ ಗ್ರಾಮದ ಶ್ರೀ ಜಗದ್ಗುರು ಫಕೀರೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ನೆರವಾಗಲು ಬ್ಯಾಗ್, ನೋಟ್ ಬುಕ್, ಪೆನ್ ಸೇರಿದಂತೆ ಆರ್ಥಿಕ ಸಹಾಯ ಮಾಡಲಾಗುತ್ತದೆ ಎಂದರು.
ಈಗಾಗಲೇ 30 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು ಆಸಕ್ತರು ಜುಲೈ 23 ರ 10 ಗಂಟೆ ಒಳಗಾಗಿ ಹೆಸರು ನೊಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 7892461233 ಗೆ ಸಂಪರ್ಕಿಸಬಹುದು ಎಂದು ಎ.ಬಿ.ಉಪ್ಪಿನ ತಿಳಿಸಿದರು.
ಈ ಸಂದರ್ಭದಲ್ಲಿ ಫಕ್ಕಿರೇಶ ಕೋರಿ, ಬಸವನೇಪ್ಪ ಕಜ್ಜಿ, ಅಂದಾನಪ್ಪ ಉಳವಪ್ಪನವರ, ಈರಣ್ಣಾ ಅಂಗಡಿ, ಮಡಿವಾಳಪ್ಪ ಅಂಗಡಿ ಸೇರಿದಂತೆ ಮುಂತಾದವರು ಇದ್ದರು.
Kshetra Samachara
19/07/2022 04:52 pm