ಧಾರವಾಡ: ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಧಾರವಾಡ ಜಿಲ್ಲೆಯ ಅನೇಕ ಕಡೆಗಳಲ್ಲಿ ಅನೇಕ ಸಂಘ, ಸಂಸ್ಥೆಗಳಿಂದ ವಿವಿಧ ಕಾರ್ಯಕ್ರಮಗಳು ನಡೆಯುತ್ತಿವೆ. ಧಾರವಾಡದ ಜೆಎಸ್‌ಎಸ್ ಶಿಕ್ಷಣ ಸಂಸ್ಥೆ ಕೂಡ ಶುಕ್ರವಾರ ವಿಭಿನ್ನ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.
ಜೆಎಸ್‌ಎಸ್ ಶಿಕ್ಷಣ ಸಂಸ್ಥೆಯು ತನ್ನೆಲ್ಲ ಅಂಗ ಸಂಸ್ಥೆಯ ವಿದ್ಯಾರ್ಥಿಗಳನ್ನು ಒಂದೆಡೆ ಸೇರಿಸಿ ಆಜಾದಿ ಕಾ ಅಮೃತ ಮಹೋತ್ಸವವನ್ನು ಆಚರಿಸಿದೆ. ಸುಮಾರು 6 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಮೈದಾನದಲ್ಲಿ ಸೇರಿಸಿ, ಎಲ್ಲಾ ವಿದ್ಯಾರ್ಥಿಗಳ ಕೈಯಲ್ಲಿ ರಾಷ್ಟ್ರಧ್ವಜ ಕೊಟ್ಟು ಸಂಭ್ರಮಾಚರಣೆ ಮಾಡಿದೆ.
ಸಾವಿರಾರು ಜನ ವಿದ್ಯಾರ್ಥಿಗಳು ಸೇರಿದ್ದ ಈ ದೃಶ್ಯ ಡ್ರೋಣ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಎಲ್ಲಾ ವಿದ್ಯಾರ್ಥಿಗಳು ದೇಶಭಕ್ತಿಯ ಘೋಷಣೆಗಳನ್ನು ಕೂಗಿ ದೇಶಪ್ರೇಮ ಮೆರೆದರು. ಈ ಕಾರ್ಯಕ್ರಮಕ್ಕೆ ಶಾಸಕ ಅರವಿಂದ ಬೆಲ್ಲದ ಕೂಡ ಸಾಕ್ಷಿಯಾದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
12/08/2022 02:08 pm