ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕ್ಲಾಸಿಕ್‌ ಇಂಟರ್ನ್ಯಾಶನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಶಿಕ್ಷಕರ ದಿನಾಚರಣೆ: ಶಿಕ್ಷಕ ದೇಶದ ರಕ್ಷಕ...!

ಧಾರವಾಡ: ಶಿಕ್ಷಕ ದೇಶದ ರಕ್ಷಕ ಸಮಾಜದ ಅಭಿವೃದ್ಧಿ ಒಬ್ಬ ಉತ್ತಮ ಶಿಕ್ಷಕನಿಂದ ಸಾಧ್ಯ. ವಿದ್ಯಾರ್ಥಿಗಳು ಸಮಾಜದ ಉತ್ತಮ ನಾಗರಿಕರಾಗಬೇಕಾದರೆ ಶಿಕ್ಷಕನ ಸೇವೆ ಅಭೂತಪೂರ್ವವಾಗಿರಬೇಕು ಎಂದು ಬೆಳಗಾವಿ ಲಿಂಗರಾಜ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಡಾ.ಗುರುದೇವಿ ಹುಲೆಪನವರಮಠ ಹೇಳಿದರು.

ಕ್ಲಾಸಿಕ್ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಭಿವೃದ್ಧಿ ಸಂಸ್ಥೆಯ ಕ್ಲಾಸಿಕ್ ಇಂಟರ್ನ್ಯಾಶನಲ್ ಪಬ್ಲಿಕ್‍ಸ್ಕೂಲ್ ನಲ್ಲಿ ಹಾಗೂ ಕ್ಲಾಸಿಕ್‍ ಕೆಎಎಸ್, ಐಎಎಸ್ ಸ್ಟಡಿ ಸರ್ಕಲ್ ಸಂಸ್ಥೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ದೇಶವನ್ನು ಕಟ್ಟುವಲ್ಲಿ ಶಿಕ್ಷಕರ ಕೊಡುಗೆ ಅಮೂಲ್ಯವಾಗಿದ್ದು, ಈ ನಿಟ್ಟಿನಲ್ಲಿ ಅವರು ತಮ್ಮ ಜವಾಬ್ದಾರಿ ಅರಿತುಕೊಂಡು ಯುವಪೀಳಿಗೆಗೆ ಉತ್ತಮ ಮಾರ್ಗದರ್ಶನ ನೀಡಬೇಕೆಂದು ಹೇಳಿದರು.

ಶಿಕ್ಷಕರ ದಿನಾಚರಣೆ ಕುರಿತು ಮಾತನಾಡಿದ ಅವರು, ಶಿಕ್ಷಕರು ಶೃದ್ಧೆ ಮತ್ತು ಕರ್ತವ್ಯ ನಿಷ್ಠೆಯಿಂದ ತಮ್ಮ ಕಾರ್ಯವನ್ನು ಸಮಾಜ ಸೇವೆ ಎಂದು ಭಾವಿಸಿ ಯಾವುದೇ ಫಲಾಪೇಕ್ಷೆಯಿಲ್ಲದೆ ಪ್ರತಿಯೊಬ್ಬ ವಿದ್ಯಾಥಿಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಅವರು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಕ್ಲಾಸಿಕ್ ಸಮೂಹ ಸಂಸ್ಥೆಗಳ ನಿರ್ದೇಶಕರಾದ ಲಕ್ಷ್ಮಣ ಉಪ್ಪಾರ ಮಾತನಾಡಿ, ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕೆ ಶಿಕ್ಷಕರು ತಮ್ಮ ತನು ಮನದಿಂದ ಬೋಧನಾ ಕಾರ್ಯವನ್ನು ಆಕರ್ಷಕದಾಯಕ ಹಾಗೂ ಸಂತಸ ದಾಯಕವಾಗಿಸಬೇಕು ಎಂದು ಹೇಳಿದರು.

ಇನ್ನೊರ್ವ ಅತಿಥಿಯಾದ ಡಾ. ಎಮ್.ವಾಯ್ ಸಾವಂತ, ಪ್ರಾಚಾರ್ಯರಾದ, ಮನೋಹರ ಕೆಂಚರಾಹುತ ಹಾಗೂ ಶರ್ವಾಣಿ ವೇದಿಕೆಯಲ್ಲಿದ್ದರು. ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲ ವಿಭಾಗದ ಮುಖ್ಯಸ್ಥರು, ಶಿಕ್ಷಕರು, ಶಾಲಾ ಸಿಬ್ಬಂದಿ ಮತ್ತು ಮಕ್ಕಳು ಪಾಲ್ಗೊಂಡಿದ್ದರು. ಪ್ರೌಢ ಶಾಲಾ ವಿಭಾಗದ ಮಕ್ಕಳು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

Edited By : Nirmala Aralikatti
Kshetra Samachara

Kshetra Samachara

06/09/2022 06:47 pm

Cinque Terre

9.57 K

Cinque Terre

0

ಸಂಬಂಧಿತ ಸುದ್ದಿ