ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಶಿಕ್ಷಕರನ್ನೇ ಸ್ಪರ್ಧೆಗಿಳಿಸಿದ ವಿದ್ಯಾರ್ಥಿಗಳು : ಹೀಗೊಂದು ಶಿಕ್ಷಕ ದಿನಾಚರಣೆ

ಧಾರವಾಡ: ಸೆ.5 ಶಿಕ್ಷಕರ ದಿನಾಚರಣೆ. ಈ ಶಿಕ್ಷಕರ ದಿನಾಚರಣೆಯನ್ನು ವಿದ್ಯಾರ್ಥಿಗಳು ಸಹಜವಾಗಿ ಆಚರಣೆ ಮಾಡಿಯೇ ಮಾಡುತ್ತಾರೆ. ಆದರೆ, ಧಾರವಾಡದಲ್ಲಿ ಶ್ರೀ ಸಾಯಿ ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜಿನ ವಿದ್ಯಾರ್ಥಿಗಳು ಶಿಕ್ಷಕರಿಗಾಗಿಯೇ ಸ್ಪರ್ಧೆ ಏರ್ಪಡಿಸುವ ಮೂಲಕ ಶಿಕ್ಷಕರ ದಿನಾಚರಣೆಯನ್ನು ಆಚರಿಸಿ ಗಮನಸೆಳೆದರು.

ಧಾರವಾಡದ ರಂಗಾಯಣದ ಸುವರ್ಣ ಸಾಂಸ್ಕೃತಿಕ ಸಮುಚ್ಚಯ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ತಮ್ಮ ನೆಚ್ಚಿನ ಶಿಕ್ಷಕರ ಪಾದ ಪೂಜೆ ಮಾಡಿ ಸನ್ಮಾನಿಸಿದರು. ಅಲ್ಲದೇ ಶಿಕ್ಷಕರ ದಿನಾಚರಣೆ ಅಂಗವಾಗಿ ಕೇಕ್ ಕತ್ತರಿಸಿ ಸಂಭ್ರಮಿಸಿದರು.

ನಂತರ ಶಿಕ್ಷಕರಿಗಾಗಿಯೇ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಶಿಕ್ಷಕರೂ ಸಹ ವಿದ್ಯಾರ್ಥಿಗಳ ಮಧ್ಯೆ ವಿದ್ಯಾರ್ಥಿಗಳಾಗಿ ನಲಿಯುವಂತೆ ಮಾಡಿ ಶಿಕ್ಷಕರ ದಿನಾಚರಣೆಗೆ ವಿಶೇಷ ಅರ್ಥ ನೀಡಿದರು.

ಕಾಲೇಜು ಅಧ್ಯಕ್ಷೆ ಡಾ.ವೀಣಾ ಬಿರಾದಾರ, ಪ್ರೊ.ಎಸ್.ಬಿ.ಗಾಡಿ, ಕಾಲೇಜು ಪ್ರಾಚಾರ್ಯ ಪ್ರೊ.ನಾಗರಾಜ ಶಿರೂರ ಸೇರಿದಂತೆ ಇತರ ಉಪನ್ಯಾಸಕರು ವಿದ್ಯಾರ್ಥಿಗಳು ಏರ್ಪಡಿಸಿದ್ದ ಸ್ಪರ್ಧೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.

Edited By : Manjunath H D
Kshetra Samachara

Kshetra Samachara

06/09/2022 08:35 pm

Cinque Terre

18.83 K

Cinque Terre

0

ಸಂಬಂಧಿತ ಸುದ್ದಿ