ಹುಬ್ಬಳ್ಳಿ: ಕೆ.ಎಚ್ ಪಾಟೀಲ ಕಾಲೇಜಿನ ವಿದ್ಯಾರ್ಥಿನಿ ನತಾಷಾ ಪವಾರ್ ಅವರು ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ನತಾಷಾ ಪವಾರ್ ಅವರು ವೇಮನ ವಿದ್ಯಾವರ್ಧಕ ಸಂಘದ ಕೆ.ಎಚ್ ಪಾಟೀಲ ವಿಜ್ಞಾನ ಹಾಗೂ ವಾಣಿಜ್ಯ ಪದವಿಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿಯಾಗಿದ್ದಾರೆ. ಅವರು ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಅಣ್ಣಿಗೇರಿಯ ಬಾಪೂಜಿ ಪ.ಪೂ ಮಹಾವಿದ್ಯಾಲಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.
ಕಾಲೇಜಿನ ಆಡಳಿತ ಮಂಡಳಿ ಪ್ರಾರ್ಥನಾ ಎಜುಕೇಶನ್ ಸೊಸೈಟಿಯ ಮುಖ್ಯಸ್ಥರು, ಪ್ರಾಚಾರ್ಯರು, ಸಹಸಂಯೋಜಕರು, ಉಪನ್ಯಾಸಕರು ಮತ್ತು ಸಿಬ್ಬಂದಿ ಅಭಿನಂದಿಸಿದರು.
Kshetra Samachara
22/09/2022 10:15 pm