ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಕೆ.ಎಚ್ ಪಾಟೀಲ ಕಾಲೇಜಿನ ವಿದ್ಯಾರ್ಥಿ

ಹುಬ್ಬಳ್ಳಿ: ವೇಮನ ವಿದ್ಯಾವರ್ಧಕ ಸಂಘದ ಕೆ.ಎಚ್ ಪಾಟೀಲ ವಿಜ್ಞಾನ ಹಾಗೂ ವಾಣಿಜ್ಯ ಪದವಿಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿ ಮಂಜಯ್ಯ ಮೂಕಶಿವಯ್ಯನವರ ಗೋಪನಕೊಪ್ಪ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆಯುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ಸಂಘದ ಗೌರವ ಕಾರ್ಯದರ್ಶಿಗಳಾದ ಆರ್.ಕೆ ಪಾಟೀಲ, ಸ್ಥಾನಿಕ ಆಡಳಿತ ಮಂಡಳಿ ಚೇರ್ಮನ್ ಅಶೋಕ ಇಟಗಿ, ಪ್ರಾಚಾರ್ಯರು, ವಿಜ್ಞಾನ ವಿಭಾಗದ ಸಹಸಂಯೋಜಕರು ಹಾಗೂ ಆಡಳಿತ ಮಂಡಳಿಯ ಸದಸ್ಯರು ಸಾಧನೆಗೈದ ವಿದ್ಯಾರ್ಥಿಯನ್ನು ಅಭಿನಂದಿಸಿದರು.

Edited By : Manjunath H D
Kshetra Samachara

Kshetra Samachara

30/09/2022 09:24 pm

Cinque Terre

22.26 K

Cinque Terre

1

ಸಂಬಂಧಿತ ಸುದ್ದಿ