ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಚಿತ್ರಮಂದಿರ ಪ್ರಾರಂಭಕ್ಕೆ ಕ್ಷಣಗಣನೆ

ಧಾರವಾಡ: ಲಾಕಡೌನ್ ಹಿನ್ನೆಲೆಯಲ್ಲಿ ಕಳೆದ 7 ತಿಂಗಳಿಂದ ಬಂದ್ ಆಗಿದ್ದ ಚಿತ್ರಮಂದಿರಗಳ ಪುನರಾರಂಭಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಚಿತ್ರ ಮಂದಿರ ತೆರೆಯುವುದಕ್ಕಾಗಿ ಧಾರವಾಡದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಕೇಂದ್ರ ಸರ್ಕಾರ ಅಕ್ಟೋಬರ್ 15 ರಿಂದಲೇ ಚಿತ್ರಮಂದಿರಗಳು ಕಾರ್ಯಾರಂಭ ಮಾಡಲು ಅವಕಾಶ ಮಾಡಿಕೊಟ್ಟಿದೆ. ಕರ್ನಾಟಕದಲ್ಲಿ ನಾಳೆಯಿಂದ ಚಿತ್ರಮಂದಿರ ಪ್ರಾರಂಭ ಮಾಡಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ತೀರ್ಮಾನಿಸಿದ್ದರಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಾಳೆಯಿಂದ ಚಿತ್ರಮಂದಿರಗಳು ಕಾರ್ಯಾರಂಭ ಮಾಡಲಿವೆ.

ಇದರ ಮುನ್ನಾ ದಿನವಾದ ಗುರುವಾರ ಧಾರವಾಡದ ಪದ್ಮಾ, ಶ್ರೀನಿವಾಸ, ವಿಜಯ ಚಿತ್ರಮಂದಿರಗಳಲ್ಲಿ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಯಿತು.

Edited By :
Kshetra Samachara

Kshetra Samachara

15/10/2020 07:54 pm

Cinque Terre

17.66 K

Cinque Terre

2

ಸಂಬಂಧಿತ ಸುದ್ದಿ