ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಚಿತ್ರ ವಿಕ್ರಾಂತ್ ರೋಣ ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಭಿಮಾನಿಗಳು ವಿಶೇಷವಾಗಿ ಸ್ವಾಗತಿಸುವ ಮೂಲಕ ಚಿತ್ರಕ್ಕೆ ಶುಭಾಶಯ ಕೋರಿದರು.
ಹೌದು... ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಅಪ್ಸರಾ ಚಿತ್ರಮಂದಿರದಲ್ಲಿ ಬೆಳ್ಳಂಬೆಳಿಗ್ಗೆಯೇ ಧಾವಿಸಿದ ಅಭಿಮಾನಿಗಳು ಸುದೀಪ್ ಫ್ಲೆಕ್ಸ್ , ಬ್ಯಾನರ್ ಗೆ ಕ್ಷೀರಾಭೀಷೇಕ ಮಾಡಿ, ಪಟಾಕಿ ಸಿಡಿಸಿ ಖುಷಿ ವ್ಯಕ್ತ ಪಡಿಸಿದರು.
ಸುಮಾರು ದಿನಗಳಿಂದಲೂ ಸಾಕಷ್ಟು ಕುತೂಹಲದಿಂದ ಕಾಯುತ್ತಿದ್ದ ಅಭಿಮಾನಿಗಳು ಸಿನಿಮಾ ಬಿಡುಗಡೆಯಾದ ಬೆನ್ನಲ್ಲೇ ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ. ಈ ಬಗ್ಗೆ ನಮ್ಮ ರಿಪೋರ್ಟರ್ ವಾಕ್ ಥ್ರೂ ಮೂಲಕ ಅಭಿಮಾನಿಗಳ ಸಂಭ್ರಮೋಲ್ಲಾಸದಲ್ಲಿ ಭಾಗಿಯಾಗಿದ್ದಾರೆ. ನೋಡೋಣ ಬನ್ನಿ...
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
28/07/2022 12:54 pm