ಹುಬ್ಬಳ್ಳಿ: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ತಿರಂಗಾ ಧ್ವಜ ರ್‍ಯಾಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಭಾಗವಹಿಸಿ ವಿದ್ಯಾರ್ಥಿಗಳ ಜೊತೆಗೆ ರಾಷ್ಟ್ರೀಯ ಧ್ವಜವನ್ನು ಹಿಡಿದು ಸಖತ್ ಸ್ಟೆಪ್ ಹಾಕಿದರು.
ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಬೃಹತ್ ತಿರಂಗಾ ಧ್ವಜದ ರ್‍ಯಾಲಿಯಲ್ಲಿ ವಿದ್ಯಾರ್ಥಿಗಳ ಜೊತೆಗೆ ಕುಣಿದು ಅಮೃತ ಮಹೋತ್ಸವದ ಸಂಭ್ರಮವನ್ನು ಅದ್ದೂರಿಯಾಗಿ ಆಚರಣೆ ಮಾಡಿದರು.
ನಿನ್ನೆಯಷ್ಟೇ ಮ್ಯೂಸಿಕಲ್ ಇನ್ಸ್ಟ್ರುಮೆಂಟ್ಸ್ ನುಡಿಸುವ ಮೂಲಕ ಎಲ್ಲರನ್ನೂ ಬೆರಗಾಗುವಂತೆ ಮಾಡಿದ್ದ ಕೇಂದ್ರ ಸಚಿವರು ಇಂದು ವಿದ್ಯಾರ್ಥಿಗಳ ಜೊತೆಗೆ ಸ್ಟೆಪ್ ಹಾಕುವ ಮೂಲಕ ಸಂಭ್ರಮಾಚರಣೆ ಮಾಡಿದ್ದಾರೆ. ಇದೇ ವೇಳೆ ಬೈಕ್ ರ್‍ಯಾಲಿಗೆ ಸ್ವತಃ ಬೈಕ್ ಚಾಲನೆ ಮಾಡುವ ಮೂಲಕವೇ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಒಟ್ಟಿನಲ್ಲಿ ವಾಣಿಜ್ಯನಗರಿಯಲ್ಲಿ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಸಚಿವರು ಕೂಡ ಜನ ಸಾಮಾನ್ಯರಂತೆಯೇ ಎಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ವಿಶೇಷವಾಗಿದೆ.
Kshetra Samachara
13/08/2022 05:11 pm