ನವಲಗುಂದ: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಅಣ್ಣಿಗೇರಿಯ ನವಲಗುಂದ ನಗರದ ಉಪಮಾರುಕಟ್ಟೆಯ ಪ್ರಾಂಗಣದಲ್ಲಿ ಭಾನುವಾರ ಅಂದಾಜು 95 ಲಕ್ಷ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಭೂಮಿಪೂಜೆ ನೆರವೇರಿಸುವುದರ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ಯಲ್ಲಪ್ಪ ಅಕ್ಕಿ, ನವಲಗುಂದ ತಾಲೂಕಾ ಬಿಜೆಪಿ ಅಧ್ಯಕ್ಷ ಎಸ್.ಬಿ ದಾನಪ್ಪಗೌಡರ, ನವಲಗುಂದ ನಗರ ಘಟಕ ಬಿಜೆಪಿ ಅಧ್ಯಕ್ಷರಾದ ಅಣ್ಣಪ್ಪ ಬಾಗಿ, ಮುಖಂಡರಾದ ಎ.ಎಮ್ ಮನಮಿ, ಬಾಪುಗೌಡ ಪಾಟೀಲ, ಚಂಬಣ್ಣ ಹಾಳದೋಟರ, ರೈತರು, ರೈತ ಮುಖಂಡರು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.
Kshetra Samachara
27/02/2022 08:36 pm