ನವಲಗುಂದ: ತಾಲೂಕಿನ ಮೊರಬ ಗ್ರಾಮದ ಕೃಷಿ ಉತ್ಪನ್ನ ಮಾರುಕಟ್ಟೆಯ ಆವರಣದಲ್ಲಿ 2021-22ನೇ ಸಾಲಿನ ಹಿಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ FAQ ಗುಣಮಟ್ಟದ ಪ್ರತಿ ಕ್ವಿಂಟಾಲ್‌ಗೆ 5230 ರೂ.ರಂತೆ ಕಡಲೆ ಕಾಳು ಖರೀದಿಸಲು, ಕಡಲೆ ಕಾಳು ಖರೀದಿ ಕೇಂದ್ರವನ್ನು ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಗ್ರಾಮದ ಗುರು-ಹಿರಿಯರು, ನವಲಗುಂದ ತಾಲೂಕು ಬಿಜೆಪಿ ಅಧ್ಯಕ್ಷರಾದ ಎಸ್.ಬಿ.ದಾನಪ್ಪಗೌಡರ, ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷರಾದ ಎ.ಎಮ್.ಮನಮಿ, ಮುಖಂಡರಾದ ಮಂಜುನಾಥ ಕಾಲವಾಡ, ಬಸವರಾಜ ಗಾಣಿಗೇರ, ರೈತರು, ಅಧಿಕಾರಿಗಳು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.
Kshetra Samachara
07/03/2022 08:37 am