ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ:ರೈತರ ಸಮಸ್ಯೆ ಬಂಡವಾಳ ಮಾಡಿಕೊಂಡವರಿಗೆ ಬಿಗ್ ಶಾಕ್: ಪಬ್ಲಿಕ್ ನೆಕ್ಸ್ಟ್ ಇಂಪ್ಯಾಕ್ಟ್ !

ವರದಿ: ಮಲ್ಲೇಶ್ ಸೂರಣಗಿ

ಹುಬ್ಬಳ್ಳಿ:ರೈತರ ರಸಗೊಬ್ಬರದ ಬೇಡಿಕೆಯನ್ನು ಬಂಡವಾಳ ಮಾಡಿಕೊಂಡು ಹಣ ವಸೂಲಿ ಮಾಡುತ್ತಿದ್ದ ರಸಗೊಬ್ಬರ ವ್ಯಾಪಾರಸ್ಥರಿಗೆ ಬಿಸಿ ಮುಟ್ಟಿಸಲು ಕೃಷಿ ಇಲಾಖೆ ಮುಂದಾಗಿದೆ. ಪಬ್ಲಿಕ್ ನೆಕ್ಸ್ಟ್ ವರದಿ ಪ್ರಸಾರಗೊಂಡ ಬೆನ್ನಲ್ಲೇ ಕೃಷಿ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮಗಳನ್ನು ಜರುಗಿಸಿದ್ದು, ಪಬ್ಲಿಕ್ ನೆಕ್ಸ್ಟ್ ವರದಿಯ ಹೀಗೆ ಬಿಗ್ ಇಂಪ್ಯಾಕ್ಟ್ ಮಾಡಿದೆ.

ಮಳೆ ಶುರುವಾಗಿದ್ದು, ಬಿತ್ತನೆಗೆ ಸಿದ್ದತೆ ನಡೆಸುತ್ತಿರುವ ಅನ್ನದಾತರು ರಸಗೊಬ್ಬರಕ್ಕಾಗಿ ಪರದಾಡುವಂತಾಗಿತ್ತು.ಇದನ್ನು ಬಂಡವಾಳ ಮಾಡಿಕೊಂಡ ವ್ಯಾಪಾರಸ್ಥರು ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟಕ್ಕೆ ಮುಂದಾಗಿದ್ದರು. ಅಲ್ಲದೇ ಸ್ಟಾಕ್ ಇದ್ದರೂ ರಸಗೊಬ್ಬರದ ಕೊರತೆಯನ್ನು ರೈತರಿಗೆ ಹೇಳಿ, ಅವರಿಂದ ಹೆಚ್ಚಿನ ಹಣವನ್ನು ವಸೂಲಿ ಮಾಡುತ್ತಿದ್ದರು. ಈ ಕುರಿತು ಪಬ್ಲಿಕ್ ನೆಕ್ಸ್ಟ್ ವರದಿ ಬಿತ್ತರಿಸಿದ ಬೆನ್ನಲ್ಲೇ, ಸಹಾಯಕ ಕೃಷಿ ಇಲಾಖೆ ಅಧಿಕಾರಿಗಳು ತಂಡವನ್ನು ರಚನೆ ಮಾಡಿ ರೈತರಿಗೆ ಆಗುವ ಅನ್ಯಾಯವನ್ನು ತಪ್ಪಿಸಲು ಮುಂದಾಗಿದ್ದಾರೆ.

ಒಟ್ಟಿನಲ್ಲಿ ರೈತರ ಸಮಸ್ಯೆ ಕುರಿತು "ಕೈಗೆ ಸಿಗದ ರಸಗೊಬ್ಬರ;ಅನ್ನದಾತರ ಪರದಾಟ" ಶೀರ್ಷಿಕೆ ಅಡಿಯಲ್ಲಿ ಪಬ್ಲಿಕ್ ನೆಕ್ಸ್ಟ್ ಬಿತ್ತರಿಸಿದ ವರದಿ ಬಿಗ್ ಇಂಪ್ಯಾಕ್ಟ್ ಆಗಿದೆ. ಕೃಷಿ ಇಲಾಖೆಯು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಹಣ ವಸೂಲಿಗೆ ನಿಂತ ವ್ಯಾಪಾರಸ್ಥರಿಗೆ ಬಿಸಿ ಮುಟ್ಟಿಸಲು ಸಿದ್ಧರಾಗಿದ್ದಾರೆ.

Edited By : Manjunath H D
Kshetra Samachara

Kshetra Samachara

11/05/2022 06:35 pm

Cinque Terre

77.97 K

Cinque Terre

3

ಸಂಬಂಧಿತ ಸುದ್ದಿ