ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಬಸ್ ಸಂಚಾರಕ್ಕೆ ಜಿಲ್ಲಾಧಿಕಾರಿ ಚಾಲನೆ: ಯಾವುದೇ ಭಯವಿಲ್ಲದೇ ಸಂಚರಿಸಲು ನಿತೇಶ ಪಾಟೀಲ ಸೂಚನೆ

ಹುಬ್ಬಳ್ಳಿ: ಸಾರಿಗೆ ಸಂಸ್ಥೆ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸುವಂತೆ ಒತ್ತಾಯಿಸಿ ರಾಜ್ಯಾದ್ಯಂತ ಕರೆ ನೀಡಿದ್ದ ಮುಷ್ಕರದ ಹಿನ್ನೆಲೆಯಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಬಸ್ ಸಂಚಾರ ಸ್ಥಗಿತಗೊಂಡಿದ್ದು,ಸಾರ್ವಜನಿಕರು ಸಾಕಷ್ಟು ಸಮಸ್ಯೆಗಳನ್ನು ಅನುಭವಿಸಿದ್ದರೂ ಇದನ್ನು ಮನಗಂಡ ಜಿಲ್ಲಾಧಿಕಾರಿ ನಿತೇಶ ಪಾಟೀಲ ಹುಬ್ಬಳ್ಳಿಯ ಹಳೇ ಬಸ್ ನಿಲ್ದಾಣಕ್ಕೆ ದೀಡಿರ್ ಭೇಟಿ ನೀಡಿ‌ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಬಸ್ ಸಂಚಾರ ಚಾಲನೆ ನೀಡಿದರು.

ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮತ್ತಷ್ಟು ಬಸ್ ಗಳ ಸಂಚಾರ ಆರಂಭಿಸುತ್ತಿದ್ದೇವೆ. ಪ್ರಯಾಣಿಕರು ಯಾವುದೇ ಆತಂಕವಿಲ್ಲದೇ ಪ್ರಯಾಣ ಮಾಡಬಹುದು.ಸಾಕಷ್ಟು ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದರು.

ಸಾರಿಗೆ ನೌಕರರು ಸೇವೆಗೆ ಆಗಮಿಸುತ್ತಾರೆ, ಯಾವುದೇ ಸಮಸ್ಯೆ ಜಿಲ್ಲೆಯಲ್ಲಿ ಇರೋಲ್ಲ.ಸಾರಿಗೆ ನೌಕರರ ಸಮಸ್ಯೆ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಾನಿಟರ್ ಮಾಡುತ್ತಿದ್ದಾರೆ. ಅಲ್ಲದೇ ಸೋಮವಾರದಿಂದ ಸಾರ್ವಜನಿಕರಿಗೆ ಸಮಸ್ಯೆ ಆಗದಂತೆ ಕಾರ್ಯ ನಿರ್ವಹಿಸಲು ಸೂಚನೆ ನೀಡಿದ್ದು,ಈ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಸಾರಿಗೆ ಬಸ್ ಸಂಚಾರ ಪ್ರಾರಂಭವಾಗಿದೆ ಎಂದರು.

Edited By :
Kshetra Samachara

Kshetra Samachara

14/12/2020 11:07 am

Cinque Terre

26.7 K

Cinque Terre

5

ಸಂಬಂಧಿತ ಸುದ್ದಿ