ಕಲಘಟಗಿ: ಗ್ರಾಮ ಪಂಚಾಯತಿ ಚುನಾವಣೆಗೆ ನೇಮಕವಾಗಿರುವ ಪ್ರಿಸೈಡಿಂಗ್ ಅಧಿಕಾರಿ ಹಾಗೂ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ಯನ್ನು ನೀಡಲಾಯಿತು.
ಕಲಘಟಗಿ ತಾಲೂಕಿನಲ್ಲಿ 26 ಗ್ರಾಮ ಪಂಚಾಯತಿಗಳಿಗೆ ದಿ:22-12-2020 ರಂದು ಚುನಾವಣೆ ನಡೆಯಲಿದ್ದು,ಇದಕ್ಕಾಗಿ ಚುನಾವಣಾ ಆಯೋಗ ಎಲ್ಲ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಬುಧವಾರ ಪಟ್ಟಣದ ಸರಕಾರಿ ಹಿರಿಯ ಕನ್ನಡ ಗಂಡು ಮಕ್ಕಳ ಪ್ರಾಥಮಿಕ ಶಾಲೆಯಲ್ಲಿ ಪ್ರಿಸೈಡಿಂಗ್ ಅಧಿಕಾರಿ ಹಾಗೂ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ ನಡೆಸಲಾಯಿತು.
Kshetra Samachara
16/12/2020 12:43 pm