ಮಿಶ್ರಿಕೋಟಿ ಗ್ರಾಮಕ್ಕೆ ಹಿಂದೂ ಸಮಾಜದ ರುದ್ರಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಮಿಶ್ರಕೋಟಿ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಮಿಶ್ರಕೋಟಿ ಗ್ರಾಮದಲ್ಲಿ ಶೇ 80 ರಷ್ಟು ಇರುವ ಹಿಂದೂ ಸಮಾಜದ ಜನಸಂಖ್ಯೆಗೆ ಅನುಗುಣವಾಗಿ ರುದ್ರಭೂಮಿ ಇಲ್ಲ. ಈ ಹಿನ್ನೆಲೆಯಲ್ಲಿ ಕೂಡಲೇ ಜಿಲ್ಲಾಡಳಿತ ಎಚ್ಚೆತ್ತು ರುದ್ರಭೂಮಿ ಮಂಜೂರು ಮಾಡಬೇಕು ಎಂದು ಆಗ್ರಹಿಸಲಾಯಿತು.
Kshetra Samachara
05/04/2022 04:17 pm