ಹುಬ್ಬಳ್ಳಿಯಲ್ಲಿ ಬಹುತೇಕ ಖಾನಾವಳಿ, ಡಾಬಾ ಮತ್ತು ಮನೆಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಹುಬ್ಬಳ್ಳಿಯ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಸಮಗ್ರ ಕರ್ನಾಟಕ ರಕ್ಷಣಾ ಸೇನೆ ಕಾರ್ಯಕರ್ತರು ಹೋರಾಟ ಮಾಡುತ್ತಿದ್ದಾರೆ.
ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಮಾಡಿದ ಅವರು, ಮಹಾತ್ಮಾ ಗಾಂಧೀಜಿಯವರ ಭಾವಚಿತ್ರವನ್ನ ಹಿಡಿದುಕೊಂಡು ಮುಂದೆ ವಿಸ್ಕಿ ಬಾಟಲ್ ಇಟ್ಟುಕೊಂಡು ವ್ಯವಸ್ಥೆಯನ್ನು ಸರಿಪಡಿಸಿ ಎಂದು ಒತ್ತಾಯಿಸಿದರು. ದಂಧೆಯ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಭ್ರಷ್ಟ ಅಧಿಕಾರಿಗಳಿಂದ ಇಂತಹ ಸ್ಥಿತಿ ಬಂದಿದೆ ಎಂದು ಹೋರಾಟಗಾರರು ಆರೋಪಿಸಿದ್ರು.
Kshetra Samachara
06/04/2022 05:10 pm