ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಮಳೆ ಹಾನಿ ಪ್ರದೇಶಕ್ಕೆ ಪಾಲಿಕೆ ಆಯುಕ್ತರ ಭೇಟಿ; ಅಸಮಾಧಾನ ಹೊರಹಾಕಿದ ಜನ

ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಮಳೆಯಿಂದ ಹಾನಿ ಪ್ರದೇಶಕ್ಕೆ ಪಾಲಿಕೆ ಆಯುಕ್ತರಾದ ಡಾ.ಗೋಪಾಲಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹುಬ್ಬಳ್ಳಿಯ ಗಣೇಶ ನಗರಕ್ಕೆ ಭೇಟಿ ನೀಡಿದ ಪಾಲಿಕೆ ಆಯುಕ್ತರು ಸಾರ್ವಜನಿಕರ ಅಹವಾಲನ್ನು ಸ್ವೀಕರಿಸಿದರು. ಇನ್ನೂ ಕಮಿಷನರ್ ಸಮ್ಮುಖದಲ್ಲಿ ಇಲ್ಲಿನ ನಿವಾಸಿಗಳು ಅಸಮಾಧಾನ ಹೊರಹಾಕಿದರು. ಸುಮಾರು ವರ್ಷಗಳಿಂದ ಮಳೆಗಾಲದ ಸಂದರ್ಭದಲ್ಲಿ ಸಮಸ್ಯೆ ಅನುಭವಿಸುತ್ತಿದ್ದೇವೆ ಎಂದು ಪಾಲಿಕೆ ಆಯುಕ್ತರ ಮುಂದೆ ಸಾರ್ವಜನಿಕರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

Edited By :
Kshetra Samachara

Kshetra Samachara

20/05/2022 01:24 pm

Cinque Terre

39.21 K

Cinque Terre

2

ಸಂಬಂಧಿತ ಸುದ್ದಿ