ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವಂತೆ ಆಗ್ರಹಿಸಿ ಎಐಡಿವೈಓ ಸಂಘಟನೆ ಕಾರ್ಯಕರ್ತರು ಧಾರವಾಡ ವಿವೇಕಾನಂದ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಇಲಾಖೆಗಳಲ್ಲಿ ಲಕ್ಷಗಟ್ಟಲೇ ಹುದ್ದೆಗಳು ಖಾಲಿ ಇವೆ. ಸರ್ಕಾರ ಅವುಗಳನ್ನು ಭರ್ತಿ ಮಾಡಿಕೊಳ್ಳದೇ ಕಾಲಹರಣ ಮಾಡುತ್ತಿದೆ. ಲಕ್ಷಾಂತರ ಜನ ಯುವಕರು ಕೆಲಸ ಇಲ್ಲದೇ ಪರದಾಡುತ್ತಿದ್ದಾರೆ.
ಎಲ್ಲ ಇಲಾಖೆಗಳಲ್ಲಿ ಈ ಗುತ್ತಿಗೆ ಎಂಬ ಪದ್ಧತಿಯನ್ನು ಈ ಸರ್ಕಾರ ಜಾರಿಗೊಳಿಸಿದೆ. ಈ ಗುತ್ತಿಗೆ ಪದ್ಧತಿ ಕೈಬಿಟ್ಟು ಕೂಡಲೇ ಸರ್ಕಾರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು.
Kshetra Samachara
29/06/2022 05:35 pm