ಧಾರವಾಡ ಮಹಾನಗರ ಪಾಲಿಕೆಯಲ್ಲಿ ಧಾರವಾಡ ಪ್ರತ್ಯೇಕ ಪಾಲಿಕೆ ಹೋರಾಟಗಾರರ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಹಿನ್ನೆಲೆಯಲ್ಲಿ ಸಭೆಯಿಂದ ಪಾಲಿಕೆ ಆವರಣಕ್ಕೆ ಆಗಮಿಸಿದ ಮೇಯರ್, ಮನವಿ ಸ್ವೀಕರಿಸಿ ಈ ಬಗ್ಗೆ ಚರ್ಚಿಸಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸುವ ಭರವಸೆ ನೀಡಿದರು.
ಹೌದು... ಸಭೆ ಆರಂಭಕ್ಕೂ ಮುನ್ನವೇ ಧಾರವಾಡದ ಹಿರಿಯ ನಾಗರಿಕರು ಹಾಗೂ ಸಾಮಾಜಿಕ ಹೋರಾಟಗಾರರು ಎಚ್.ಡಿ.ಎಂ.ಸಿ ಬೇಡ, ಡಿ.ಎಂ.ಸಿ. ಬೇಕು ಎಂದು ಹೋರಾಟ ನಡೆಸಿದ್ದರು. ಈ ನಿಟ್ಟಿನಲ್ಲಿ ಧಾರವಾಡದ ಹಿರಿಯ ನಾಗರಿಕರ ಮನವಿಯನ್ನು ಸ್ವೀಕರಿಸಿದರು.
ಬಳಿಕ ಮಾತನಾಡಿದ ಅವರು, ಈ ಹೋರಾಟ ಸಾಕಷ್ಟು ಮುನ್ನೆಲೆಗೆ ಬಂದಿದ್ದು, ಈ ಬಗ್ಗೆ ನಮ್ಮ ಗಮನಕ್ಕೂ ಬಂದಿದೆ. ಈ ಬಗ್ಗೆ ಸಮರ್ಪಕ ತನಿಖೆಯನ್ನು ನಡೆಸಿ ರಾಜ್ಯ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲಾಗುತ್ತದೆ ಎಂದು ಭರವಸೆ ನೀಡಿದರು.
Kshetra Samachara
30/06/2022 06:35 pm