ರಾಜ್ಯಾದ್ಯಂತ ಪ್ಲಾಸ್ಟಿಕ್ ನಿಷೇಧ ಹಿನ್ನೆಲೆಯಲ್ಲಿ ಹುಬ್ಬಳ್ಳಿ ನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿದ ಪಾಲಿಕೆ ಸಿಬ್ಬಂದಿ ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದವರಿಗೆ ದಂಡದ ಬಿಸಿ ಮುಟ್ಟಿಸಿದ್ದಾರೆ.
ಹೌದು.. ಪಾಲಿಕೆ ಮುಖ್ಯ ವೈದ್ಯಾಧಿಕಾರಿ ಶ್ರೀಧರ್ ದಂಡಪ್ಪನವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದು, ಜನತಾ ಬಜಾರ್ ಮತ್ತಿತರ ಕಡೆ ದಾಳಿ ಮಾಡಿದ ಸಿಬ್ಬಂದಿ ಬೇಕರಿ, ಕಿರಾಣಿ ಅಂಗಡಿ, ಬಾರ್ ಮತ್ತಿತರ ಕಡೆ ತಪಾಸಣೆ ನಡೆಸಿದ್ದಾರೆ.
ಇನ್ನೂ ಹತ್ತಾರು ಕೆ.ಜಿ. ಪ್ಲಾಸ್ಟಿಕ್ ಚೀಲ ವಶಕ್ಕೆ ಪಡೆದಿದ್ದು, ಪ್ಲಾಸ್ಟಿಕ್ ಚೀಲ ಬಳಸುತ್ತಿದ್ದವರಿಗೆ ದಂಡದ ಬಿಸಿ ಮುಟ್ಟಿಸಿದ್ದಾರೆ. ಮುಂದೆ ಪ್ಲಾಸ್ಟಿಕ್ ಬಳಸದೇ ಇರುವಂತೆ ತಾಕೀತು ಮಾಡಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
02/07/2022 04:36 pm