ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ನೆರೆ ಪೀಡಿತ ಪ್ರದೇಶಗಳಿಗೆ ಸೂಕ್ತ ಪರಿಹಾರ ಒದಗಿಸಲು ಸೂಚನೆ; ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ಮಳೆ ಪ್ರವಾಹ ಹಿನ್ನೆಲೆಯಲ್ಲಿ, ಈಗಾಗಲೇ ಪ್ರವಾಹ ಪೀಡಿತ ಜಿಲ್ಲೆಗಳ ಡಿಸಿ ಗಳ ಜೊತೆ ಸಭೆ ನಡೆಸಿದ್ದೇನೆ. ಮಹಾರಾಷ್ಟ್ರ ಹಾಗೂ ನಮ್ಮ ರಾಜ್ಯದ ಡಿಸಿಗಳು ಸಂಪರ್ಕದಲ್ಲಿರುವಂತೆ ಸೂಚನೆ ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನದಿಗಳ ಪ್ರವಾಹಕ್ಕೆ ಶಾಶ್ವತ ಪರಿಹಾರ ನೀಡಲು ಚಿಂತನೆ ನಡೆದಿದೆ.

ನೀರಿನ ಪ್ರಮಾಣಕ್ಕೆ ತಕ್ಕಂತೆ ಬಳಿಕೆಗೆ ಕುರಿತು ಯೋಜನೆ ರೂಪಿಸಲಾಗುತ್ತಿದೆ. ತಾಂತ್ರಿಕ ದೋಷದಿಂದ ಎರಡೂವರೇ ಲಕ್ಷ ಮಂಜೂರಾತಿ ವಿಳಂಬವಾಗಿತ್ತು ಈಗ ಅದನ್ನು ಸರಿಪಡಿಸಲಾಗಿದೆ ಎಂದರು.

ಕಚ್ಚಾ ಮನೆಗಳನ್ನು ಪಕ್ಕಾ ಮಾಡಲು ಚಿಂತನೆ ನಡೆದಿದೆ. ರಾಜ್ಯದ ನೆರೆ ನಷ್ಟದ ಬಗ್ಗೆ ವರದಿ ತಯಾರಿಸಿ ಶೀಘ್ರವಾಗಿ ಕೇಂದ್ರಕ್ಕೆ ಸಲ್ಲಿಸಲಾಗುತ್ತೆ. ಈಗಾಗಲೇ ಎಲ್ಲಾ ಉಸ್ತುವಾರಿಗಳು ಅವರಿಗೆ ಸಂಬಂಧಪಟ್ಟ ಜಿಲ್ಲೆಯಲ್ಲಿ ಪ್ರವಾಹ ಕಾರ್ಯೋನ್ಮುಖ ರಾಗಿದ್ದು ನಿತ್ಯ ಅವರ ಸಂಪರ್ಕದಲ್ಲಿದ್ದೇನೆ ಎಂದರು.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

16/07/2022 02:23 pm

Cinque Terre

47.29 K

Cinque Terre

4

ಸಂಬಂಧಿತ ಸುದ್ದಿ