ಸತತವಾಗಿ ಒಂದೇ ಪೊಲೀಸ್ ಠಾಣೆಯಲ್ಲಿ ನಾಲ್ಕು ವರ್ಷಗಳಗಿಂತ ಹೆಚ್ಚು ಅವಧಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿಗಳ ಮಾಹಿತಿ ನೀಡುವಂತೆ ಪೊಲೀಸ್ ಆಯುಕ್ತ ಲಾಬುರಾಮ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.
ಹೌದು ! 2022 ಏಪ್ರಿಲ್ 30ರ ಅಂತ್ಯಕ್ಕೆ ನಾಲ್ಕು ವರ್ಷ ಪೂರ್ಣಗೊಳಿಸಿದ ಅಥವಾ ಅದಕ್ಕಿಂತ ಹೆಚ್ಚು ವರ್ಷಗಳಿಂದ ಒಂದೇ ಠಾಣೆಯಲ್ಲಿ ಕೆಲಸ ಮಾಡುತ್ತಿರುವ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿಯ ಮಾಹಿತಿ ನೀಡುವಂತೆ ಪೊಲೀಸ್ ಆಯುಕ್ತರು ಎಲ್ಲ ಎಸಿಪಿ ಹಾಗೂ ಇನ್‌ಸ್ಪೆಕ್ಟರ್‌ಗಳಿಗೆ ಸೂಚಿಸಿದ್ದಾರೆ.
ಮೇ 25 ರ ಒಳಗಾಗಿ ಕಡ್ಡಾಯವಾಗಿ ಮಾಹಿತಿ ನೀಡುವಂತೆ ತಿಳಿಸಿದ್ದು ಇದರಿಂದ ಒಂದೇ ಠಾಣೆಯಲ್ಲಿ ಹಲವಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತ ಝಂಡಾ ಊರಿರುವ ಪೊಲೀಸರಿಗೆ ವರ್ಗಾವಣೆಯ ಬಿಸಿ ತಟ್ಟಲಿದೆ ಎನ್ನಲಾಗುತ್ತಿದೆ.
Kshetra Samachara
18/05/2022 01:44 pm