ನವಲಗುಂದ : ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ತಾಲೂಕು ಮಹಿಳಾ ಘಟಕದ ವತಿಯಿಂದ ವಸತಿ ಯೋಜನೆಯ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಸಮಯಾವಕಾಶವನ್ನು ವಿಸ್ತರಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ವೀರಪ್ಪ ಹಸಬಿ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು.
ಪ್ರಸಕ್ತ ಸಾಲಿನ 2021-22ರ ವಾಜಪೇಯಿ ನಗರ ವಸತಿ ಯೋಜನೆ ಡಾ. ಬಿ.ಆರ್ ಅಂಬೇಡ್ಕರ್ ವಸತಿ ಯೋಜನೆ ಹಾಗೂ ಕೊಳಚೆ ನಿರ್ಮೂಲನ ಮಂಡಳಿಯ ವಸತಿ ರಹಿತರಿಗೆ ವಸತಿ ಕಲ್ಪಿಸಲು ಅರ್ಜಿ ಸಲ್ಲಿಸುವ ನಿಗದಿಪಡಿಸಿದ ದಿನಾಂಕವನ್ನು ವಿಸ್ತರಿಸಬೇಕು. ಇಲ್ಲವಾದಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದು ಪುರಸಭೆ ಮುಖ್ಯಾಧಿಕಾರಿ ವೀರಪ್ಪ ಹಸಬಿ ಅವರಿಗೆ ಮನವಿ ಸಲ್ಲಿಸಿದರು.
Kshetra Samachara
05/02/2022 09:11 am