ಧಾರವಾಡ: ಚೆಂಬೆಳಕಿನ ಕವಿ, ನಾಡೋಜ ಡಾ.ಚೆನ್ನವೀರ ಕಣವಿ ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಇಂದು ಮಧ್ಯಾಹ್ನದಿಂದ ಡಾ.ಚೆನ್ನವೀರ ಕಣವಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ ಕೆಸಿಡಿ ಆವರಣದಲ್ಲಿ ಇರಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.
ಕಳೆದ ಜನವರಿ 14 ರಂದು ಎಸ್‌ಡಿಎಂ ಆಸ್ಪತ್ರೆಗೆ ದಾಖಲಾಗಿ ಡಾ.ಕಣವಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆರಂಭದಲ್ಲಿ ಕೋವಿಡ್ ಸೋಂಕು ತಗುಲಿದ್ದರಿಂದ ಚಿಕಿತ್ಸೆ ನೀಡಿ, ಗುಣಮುಖಗೊಳಿಸಲಾಗಿತ್ತು. ನಂತರ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಜಿಲ್ಲಾಡಳಿತದಿಂದ ಅಗತ್ಯ ಚಿಕಿತ್ಸೆಗೆ ಕ್ರಮವಹಿಸಲಾಗಿತ್ತು. ಮುಖ್ಯಂತ್ರಿಗಳು ಸ್ವತಃ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದರು.
ಚಿಕಿತ್ಸೆ ಫಲಿಸದೇ ಡಾ. ಕಣವಿ ಅವರು ಇಂದು ಬೆಳಿಗ್ಗೆ ನಿಧನರಾಗಿದ್ದು, ಅವರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ಕೆಸಿಡಿ ಆವರಣದಲ್ಲಿ ಜಿಲ್ಲಾಡಳಿತದಿಂದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸಂಜೆ ಧಾರವಾಡ ಕೆಲಗೇರಿ ಸಮೀಪದಲ್ಲಿರುವ ಅವರ ಫಾರ್ಮ್ ಹೌಸದಲ್ಲಿ ಅಂತ್ಯಕ್ರಿಯೆ ಜರುಗಿಸಲು ಅವರ ಕುಟುಂಬ ಸದಸ್ಯರು ನಿರ್ಧರಿಸಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
Kshetra Samachara
16/02/2022 11:21 am