ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ತಾರಿಹಾಳ ಫ್ಯಾಕ್ಟರಿ ದುರಂತ ನಡೆದು ತಿಂಗಳಾದರೂ ಪರಿಹಾರ ಸಿಕ್ಕಿಲ್ಲ!

ಸರ್ಕಾರ ಹೇಳುವುದು ಒಂದು ಮಾಡುವುದು ಮತ್ತೊಂದು ಎಂಬುವಂತಾಗಿದೆ. ಭರವಸೆ ನೀಡುವ ಸರ್ಕಾರ ಕೊಟ್ಟ ಮಾತಿನಂತೆ ನಡೆಯದೇ ದಡ್ಡತನ ತೋರುತ್ತಿದೆ. ಹುಬ್ಬಳ್ಳಿಯ ಹೊರ ವಲಯ ತಾರಿಹಾಳ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಬಹುದೊಡ್ಡ ಅಗ್ನಿ ಅವಘಡ ಸಂಭವಿಸಿ ತಿಂಗಳು ಕಳೆದಿದೆ. ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಹಲವು ಜನಪ್ರತಿನಿಧಿಗಳು ಬಂದು ಹುಸಿ ಭರವಸೆ ನೀಡಿ ಹೋಗಿದ್ದಾರೆ. ವಿನಃ ಇದುವರೆಗೂ ಯಾವುದೇ ರೀತಿಯಲ್ಲಿ ಪರಿಹಾರ ವಿತರಣೆ ಆಗಿಲ್ಲ.

ಐ.ಸಿ. ಪ್ಲೇಮ್ ಕಾರ್ಖಾನೆಯಲ್ಲಿ ಜುಲೈ 23ರಂದು ಸಂಭವಿಸಿದ್ದ ಅಗ್ನಿ ದುರಂತದಲ್ಲಿ ಮೃತಪಟ್ಟ 6 ಕಾರ್ಮಿಕರ ಕುಟುಂಬದವರಿಗೆ ರಾಜ್ಯ ಸರ್ಕಾರ ಘೋಷಿಸಿದ್ದ ತಲಾ ಐದು ಲಕ್ಷ ರೂ. ಪರಿಹಾರ ಧನ ಇನ್ನೂ ವಿತರಣೆಯಾಗಿಲ್ಲ. ಅಗ್ನಿ ಅವಘಡದಲ್ಲಿ 8 ಕಾರ್ಮಿಕರು ಗಂಭೀರವಾಗಿ ಗಾಯಗೊಂಡು ಕಿಮ್ಸ್‌ಗೆ ದಾಖಲಾಗಿದ್ದರು. ಅಂದು ಒಬ್ಬ ಮಹಿಳೆ, ಮರುದಿನ ಇಬ್ಬರು ಮೃತಪಟ್ಟಿದ್ದರು. ನಂತರ ಮೂವರು ಕಾರ್ಮಿಕರು ಸೇರಿ ಒಟ್ಟು ಆರು ಕಾರ್ಮಿಕರು ಮೃತಪಟ್ಟಿದ್ದಾರೆ.

ಘಟನೆ ಸಂಭವಿಸಿದ ಮರುದಿನ ಕಿಮ್ಸ್‌ಗೆ ಭೇಟಿ ನೀಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ, ಶಾಸಕ ಅರವಿಂದ ಬೆಲ್ಲದ ಹಾಗೂ ಅಧಿಕಾರಿಗಳು, ಮೃತರ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದರು. ಆದರೆ, ಈವರೆಗೆ ಬಿಡಿಗಾಸೂ ಮೃತರ ಕುಟುಂಬದವರ ಕೈ ಸೇರಿಲ್ಲ.

ಮೃತರ ಮಕ್ಕಳ ಆರೈಕೆ ಮಾಡಲು ಬಾಲ ವಿಕಾಸ ಯೋಜನೆಯಡಿ ಮೂರು ವರ್ಷಗಳ ಕಾಲ ಅನುದಾನ ಒದಗಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದರು. ಈ ಬಗ್ಗೆ ಇದುವರೆಗೂ ಸ್ಪಷ್ಟನೆ ಸಿಕ್ಕಿಲ್ಲ. ಇನ್ನಾದರೂ ರಾಜ್ಯ ಸರ್ಕಾರ ಕೊಟ್ಟ ಭರವಸೆಯಂತೆ ನಡೆದುಕೊಳ್ಳಬೇಕು ಎಂಬುದು ಮೃತರ ಕುಟುಂಬದವರ ಅಳಲು.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

22/08/2022 04:18 pm

Cinque Terre

69.83 K

Cinque Terre

1

ಸಂಬಂಧಿತ ಸುದ್ದಿ