ಪ್ರಾಥಮಿಕ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಆಯಾಗಳ ಬೇಸಿಗೆ ಸಂಬಳವನ್ನು ಬಾಕಿ ಇರಿಸಿಕೊಳ್ಳಲಾಗಿದೆ. ಕೂಡಲೇ ಬಾಕಿ ಸಂಬಳವನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಆಯಾಗಳ ಸಂಘದ ಸದಸ್ಯರು ಧಾರವಾಡದ ಸಾರ್ವಜನಿಕ ಶಿಕ್ಷಣ ಇಲಾಖೆ ಎದುರಿಗೆ ಪ್ರತಿಭಟನೆ ನಡೆಸಿದರು.
ಬೇಸಿಗೆ ಸಂದರ್ಭದಿಂದ ಇಲ್ಲಿಯವರೆಗೆ ಆಯಾಗಳಿಗೆ ಸಂಬಳವನ್ನೇ ನೀಡಿಲ್ಲ. ಸಂಬಳ ಇಲ್ಲದ ಕಾರಣ ಆಯಾಗಳ ಬದುಕು ದುಸ್ತರವಾಗಿದೆ. ಕೂಡಲೇ ಸಂಬಳ ಬಿಡುಗಡೆ ಮಾಡಬೇಕು ಹಾಗೂ ಪಿಂಚಣಿ ಸೌಲಭ್ಯವನ್ನೂ ನೀಡಬೇಕು ಎಂದು ಆಗ್ರಹಿಸಿದರು.
Kshetra Samachara
13/07/2022 03:23 pm