ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಅವಳಿನಗರದಲ್ಲಿ ಶಾಂತತೆಯಿಂದ ಗಣೇಶ ಚತುರ್ಥಿ ಆಚರಣೆಗೆ ಸೂಚನೆ:ಪೊಲೀಸ್ ಕಮೀಷನರ್..!

ಹುಬ್ಬಳ್ಳಿ: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ‌ನಗರದಲ್ಲಿ ಸೂಕ್ತ ಬಂದೋಬಸ್ತ ಕೈಗೊಳ್ಳಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಹು-ಧಾ ಪೊಲೀಸ್ ಆಯುಕ್ತ ಲಾಬೂರಾಮ್ ಹೇಳಿದರು.

ಪೊಲೀಸ್ ಕಮೀಷನರ್ ಕಚೇರಿಯಲ್ಲಿಂದು ಗಣೇಶ ಮಂಡಳಿ ಸದಸ್ಯರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು,ಅವಳಿನಗರದಲ್ಲಿ ಶಾಂತತೆಯಿಂದ ಗಣೇಶ ಚತುರ್ಥಿಯನ್ನು ಆಚರಣೆಗೆ ಸೂಚನೆ ನೀಡಲಾಗಿದ್ದು, ಅದಕ್ಕಾಗಿ ಎಲ್ಲ ವಿಭಾಗದ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಲಾಗಿದೆ.

ಅವಳಿನಗರದಲ್ಲಿ ಸೂಕ್ತವಾದ ಬಂದೋಬಸ್ತ ನಿಯೋಜನೆ ಮಾಡಲಾಗಿದ್ದು, ಕೆಎಸ್ ಆರ್ ಪಿ, ಸಿಎಆರ್, ಹೋಂ ಗಾರ್ಡ್ಸ್ ಸೇರಿದಂತೆ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗುತ್ತಿದೆ.

ಗಣೇಶ ಮಂಡಳಿಗಳು ಕೋವಿಡ್ ನಿಯಮ ಪಾಲಿಸಲು ‌ಕಟ್ಟುನಿಟ್ಟಿನ‌ ಸೂಚನೆ ನೀಡಲಾಗಿದೆ. ಈ ವರ್ಷವೂ ಗಣೇಶ ಮೆರವಣಿಗೆಗೆ ಅವಕಾಶ ನಿರಾಕರಣೆ ಮಾಡಲಾಗಿದ್ದು, ಕೇವಲ 20 ಜನರು ಮಾತ್ರ ಗಣೇಶ ವಿಸರ್ಜನೆ ಪಾಲ್ಗೊಳ್ಳಲು ಸೂಚನೆ ನೀಡಲಾಗಿದೆ ಎಂದರು.

Edited By : Shivu K
Kshetra Samachara

Kshetra Samachara

09/09/2021 09:34 pm

Cinque Terre

49.09 K

Cinque Terre

2

ಸಂಬಂಧಿತ ಸುದ್ದಿ