ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಅನುಮತಿ ಕೋರಿದ ಹುಬ್ಬಳ್ಳಿ ಗಣೇಶೋತ್ಸವ ಮಂಡಳಿಗೆ ಕೋರಿಕೆಗೆ ಪಾಲಿಕೆ ಅಧಿಕಾರಿಗಳು ನಿರಾಕರಿಸಿದ್ದರ ಹಿನ್ನಲೆಯಲ್ಲಿ, ಇಂದು ಹುಬ್ಬಳ್ಳಿ ಗಣೇಶೋತ್ಸವ ಮಂಡಳಿ ಪಾಲಿಕೆಗೆ ಮುತ್ತಿಗೆ ಹಾಕಿದ್ದು, ಪೊಲೀಸ್ ಬಂದೋಬಸ್ತ್ ಕೂಡ ಮಾಡಲಾಗಿದೆ.
ಗಣೇಶೋತ್ಸವ ಮಂಡಳಿ, ಶ್ರೀರಾಮಸೇನಾ, ಕೆಲ ಕನ್ನಡಪರ ಸಂಘಟನೆಗಳು, ವಿಶ್ವ ಹಿಂದೂ ಪರಿಷತ್ ಸೇರಿದಂತೆ ಹಲವಾರು ಸಂಘಟನೆಗಾರರು ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಮಾಡುವುದಕ್ಕೆ ಅವಕಾಶ ನೀಡಬೇಕೆಂದು ಪಾಲಿಕೆ ಆವರಣದಲ್ಲಿ ಕುಳಿತುಕೊಂಡು ಪ್ರತಿಭಟನೆ ಮಾಡಿದರು.
Kshetra Samachara
22/08/2022 04:37 pm