ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಇಂಗ್ಲಿಷ್ ನಾಮಫಲಕ ತೆರವುಗೊಳಿಸಿದ ಡಿಸಿ

ಧಾರವಾಡ: ರಾಷ್ಟ್ರ ಕವಿ ಕುವೆಂಪು ಅವರ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾ ಕನ್ನಡ ಜಾಗೃತಿ ಸಮಿತಿಯು ಧಾರವಾಡದಲ್ಲಿ ಹಮ್ಮಿಕೊಂಡಿದ್ದ ಜಾಥಾ ಕಾರ್ಯಕ್ರಮಕ್ಕೆ

ಹಾಗೂ ಕರ್ನಾಟಕ ವಿದ್ಯಾವರ್ಧಕ ಸಂಘದ ಆವರಣದಲ್ಲಿ ಆಯೋಜಿಸಿದ್ದ ನಾಮಫಲಕದಲ್ಲಿ ಕನ್ನಡ ಅಕ್ಷರ ಬರೆಯುವ ಅಭಿಯಾನಕ್ಕೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಚಾಲನೆ ನೀಡಿದರು.

ನಂತರ ಅವರು ಜಾಥಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿವಿಧ ಅಂಗಡಿ, ಹೋಟೆಲ್, ವಾಣಿಜ್ಯ ಸಂಕೀರ್ಣ ಕಟ್ಟಡಗಳಿಗೆ ಅಳವಡಿಸಿದ್ದ

ಇಂಗ್ಲಿಷ್ ಅಕ್ಷರವಿರುವ ನಾಮಫಲಕಗಳನ್ನು ಪಾಲಿಕೆ ಸಿಬ್ಬಂದಿ ಸಹಾಯದಿಂದ ಖುದ್ದು ನಿಂತು, ಸ್ವತಃ ತೆರವುಗೊಳಿಸಿ, ಅವುಗಳನ್ನು ಮಹಾನಗರಪಾಲಿಕೆಗೆ ಒಪ್ಪಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯ್ತಿ ಸಿಇಓ ಡಾ.ಸುಶೀಲಾ ಬಿ., ಉಪವಿಭಾಗಾಧಿಕಾರಿ ಡಾ.ಗೋಪಾಲ ಕೃಷ್ಣ ಬಿ. ಸೇರಿದಂತೆ ಇನ್ನೂ ಅನೇಕರು ಇದ್ದರು.

ಕನ್ನಡ ಜಾಗೃತಿ ಜಾಥಾ ನಡಿಗೆಯು ಕರ್ನಾಟಕ ವಿದ್ಯಾವರ್ಧಕ ಸಂಘದಿಂದ ಆರಂಭಗೊಂಡು ಜಿಲ್ಲಾ ಆಸ್ಪತ್ರೆ ರಸ್ತೆ, ಶಿವಾಜಿ ವೃತ್ತ, ಅಂಜುಮನ್ ಕಾಲೇಜು ಮೂಲಕ ಹಳೇ ಬಸ್ ನಿಲ್ದಾಣಕ್ಕೆ ಬಂದು ಮುಕ್ತಾಯಗೊಂಡಿತು.

Edited By : Manjunath H D
Kshetra Samachara

Kshetra Samachara

29/12/2020 02:15 pm

Cinque Terre

40.66 K

Cinque Terre

8

ಸಂಬಂಧಿತ ಸುದ್ದಿ