ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯಲ್ಲಿ ನಾಳೆ ಪ್ರತಿಬಂಧಕಾಜ್ಞೆ ಜಾರಿ

ಧಾರವಾಡ: ಗ್ರಾಮ ಪಂಚಾಯತ ಸಾರ್ವತ್ರಿಕ ಚುನಾವಣೆ 2020ಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 30 ರಂದು ಮತ ಎಣಿಕೆ ಜರುಗಲಿರುವುದರಿಂದ ಮತ ಎಣಿಕೆ ಅವಧಿಯಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಿಕೊಂಡು ಬರುವ ಹಾಗೂ ಮತ ಎಣಿಕೆಯು ಸುಗಮವಾಗಿ ಮತ್ತು ಮುಕ್ತವಾಗಿ ಜರುಗಿಸುವ ಹಿತದೃಷ್ಠಿಯಿಂದ ಧಾರವಾಡ ಜಿಲ್ಲೆಯಾದ್ಯಂತ ಸಿಆರ್ ಪಿಸಿ 1973 ಕಲಂ 144ರ ಮೇರೆಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಪ್ರತಿಬಂಧಕಾಜ್ಞೆ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಧಾರವಾಡ ಜಿಲ್ಲೆಯಾದ್ಯಂತ ಡಿಸೆಂಬರ್ 30ರ ಬೆಳಿಗ್ಗೆ 6 ಗಂಟೆಯಿಂದ ಪ್ರಾರಂಭಿಸಿ ಡಿಸೆಂಬರ್ 31ರ ಬೆಳಿಗ್ಗೆ 6 ಗಂಟೆಯವರೆಗೆ ಪ್ರತಿಬಂಧಕಾಜ್ಞೆ ಜಾರಿಯಲ್ಲಿರುತ್ತದೆ. ಪ್ರತಿಬಂಧಕಾಜ್ಞೆ ಜಾರಿ ಇರುವ ಸಮಯದಲ್ಲಿ, ಧಾರವಾಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯತ ಚುನಾವಣೆಯ ಮತ ಎಣಿಕೆ ಜರುಗುತ್ತಿರುವ ನಿಮಿತ್ಯ 05 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ.

ಶಸ್ತ್ರ ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.

ಕಲ್ಲುಗಳನ್ನು, ಕ್ಷಾರಪಧಾರ್ಥ ಇಲ್ಲವೆ ಸ್ಫೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಸದರಿ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ.

ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕರ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.

ಯಾವುದೇ ವ್ಯಕ್ತಿ, ಸಾರ್ವಜನಿಕರಾಗಲಿ ಮಾರಕಾಸ್ತ್ರಗಳು, ಸ್ಫೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡುಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಯಾವುದೇ ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂಥಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಅಲ್ಲದೇ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು.

ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಕೊವೀಡ್ ಕಾರ್ಯಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ, ಮದುವೆ ಮತ್ತು ಇತರ ಧಾರ್ಮಿಕ ಮೆರವಣಿಗೆಗಳು ಯಾವತ್ತೂ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ನಿಯಮಗಳನ್ನು ಪಾಲಿಸಬೇಕೆಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

29/12/2020 09:47 pm

Cinque Terre

19.92 K

Cinque Terre

0

ಸಂಬಂಧಿತ ಸುದ್ದಿ