ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜ. 4 ರಂದು ಧಾರವಾಡ ಜಿಲ್ಲೆಯ ಮತದಾರರ ಯಾದಿ ವೀಕ್ಷಕರ ಸಭೆ

ಧಾರವಾಡ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಧಾರವಾಡ ಜಿಲ್ಲೆಯ 7 ವಿಧಾನಸಭಾ ಮತ ಕ್ಷೇತ್ರಗಳಲ್ಲಿನ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ತೊಂದರೆಗಳಿದ್ದಲ್ಲಿ ಆಕ್ಷೇಪಣೆ ಸಲ್ಲಿಸಲು ಕಳೆದ ನವೆಂಬರ್ 18 ರಿಂದ ಡಿಸೆಂಬರ್ 17 ರವರೆಗೆ ಅವಕಾಶ ಕಲ್ಪಿಸಲಾಗಿತ್ತು.

ಈ ಕುರಿತು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳ ಸ್ವೀಕಾರ ಮತ್ತು ವಿಲೇವಾರಿ ಬಗ್ಗೆ ಪರಿಶೀಲಿಸಲು ಜಿಲ್ಲಾ ಚುನಾವಣಾ ಮತದಾರರ ಪಟ್ಟಿ ವೀಕ್ಷಕರಾದ ತುಳಸಿ ಮೇದಿನೇನಿ ಅವರು ಧಾರವಾಡ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಜನೇವರಿ 4 ರಂದು ಮಧ್ಯಾಹ್ನ 3 ಗಂಟೆಗೆ ಸಭೆ ನಡೆಸಲಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

02/01/2021 05:48 pm

Cinque Terre

23.8 K

Cinque Terre

1

ಸಂಬಂಧಿತ ಸುದ್ದಿ