ಹುಬ್ಬಳ್ಳಿ : ಕರ್ನಾಟಕ ಲೋಕಾಯುಕ್ತದ ಧಾರವಾಡ ವಿಭಾಗದ ಪೊಲೀಸ್ ಅಧೀಕ್ಷಕರ ಕಚೇರಿಯ ಅಧಿಕಾರಿಗಳು ಜನವರಿ 16ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕುಂದಗೋಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ, ಜ.19 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನವಲಗುಂದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸಾರ್ವಜನಿಕರ ಕುಂದುಕೊರತೆ ಅಹವಾಲು ಸಭೆ ನಡೆಸಲಿದ್ದಾರೆ.
ಈ ಸಭೆಗಳಲ್ಲಿ ತಾಲೂಕು ಮಟ್ಟದ ಎಲ್ಲಾ ಇಲಾಖೆಗಳು ಅಧಿಕಾರಿಗಳು ಹಾಜರಿರುತ್ತಾರೆ. ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ಪರಿಹರಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ 0836-2447289 ದೂರವಾಣಿ ಸಂಪರ್ಕಿಸಬಹುದು ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ವಿಜಯಕುಮಾರ್ ಆರ್. ಬಿಸನಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
12/01/2021 08:37 am