ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಮತದಾನ ಪವಿತ್ರವಾದ ಹಕ್ಕು

ಧಾರವಾಡ: ಮತದಾನ ಎಂಬುದು ಭಾರತದ ಸಂವಿಧಾನವು ದೇಶದ ಅರ್ಹ ನಾಗರಿಕರಿಗೆ ನೀಡಿರುವ ಪವಿತ್ರವಾದ ಹಕ್ಕು. ಪ್ರತಿಯೊಬ್ಬರು ಶ್ರದ್ಧೆಯಿಂದ ತಮ್ಮ ಪವಿತ್ರವಾದ ಮತದಾನದ ಹಕ್ಕನ್ನು ಚಲಾಯಿಸಿ, ಸಶಕ್ತ, ಸದೃಢ ಭಾರತ ನಿರ್ಮಿಸಲು ಕೈಜೋಡಿಸಬೇಕು ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಉಮೇಶ ಅಡಿಗ ಹೇಳಿದರು.

ಅವರು ಇಂದು ಕೆಸಿಡಿ ಆವರಣದಲ್ಲಿನ ಸೃಜನಾ ರಂಗಮಂದಿರಲ್ಲಿ ಭಾರತ ಚುನಾವಣಾ ಆಯೋಗ ಮತ್ತು ಜಿಲ್ಲಾಡಳಿತದಿಂದ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಭಾರತದ ಭವಿಷ್ಯ ಮತದಾರರ ಕೈಯಲ್ಲಿದೆ. ಪ್ರತಿ ಚುನಾವಣೆಗಳಲ್ಲಿ ತಪ್ಪದೇ ಮತದಾನ ಮಾಡುವ ಮೂಲಕ ಉತ್ತಮ ಮತ್ತು ಪ್ರಾಮಾಣಿಕ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಿ ದೇಶದ ಅಭಿವೃದ್ಧಿಗೆ ತಮ್ಮ ಕೊಡುಗೆ ನೀಡಬೇಕು ಎಂದು ಹೇಳಿದರು.

ಆಮಿಷಗಳಿಗೆ, ಪ್ರಭಾವಗಳಿಗೆ ಒಳಗಾಗಿ ಮತ್ತು ಮತದಾನ ಮಾಡಿದ ನಂತರ ಉತ್ತಮ ವ್ಯಕ್ತಿಗಳನ್ನು ಆಯ್ಕೆ ಮಾಡಲಿಲ್ಲವೆಂದು ಹಿಂದಿನಿಂದ ಪರಿತಪಿಸುವ ಬದಲು ಚುನಾವಣೆಗಳಲ್ಲಿ ಜಾಗೃತಿಯಿಂದ ಮತದಾನ ಮಾಡಬೇಕು. ಪ್ರತಿಯೊಬ್ಬ ವಯಸ್ಕ ನಾಗರಿಕ ಮತದಾರ ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಮತ್ತು ಮತದಾರ ಚೀಟಿ ಹೊಂದಿರುವಂತೆ ನೋಡಿಕೊಳ್ಳುವುದು ಎಲ್ಲರ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆರ್.ಎಸ್. ಚಿಣ್ಣನ್ನವರ ಮಾತನಾಡಿ, ಭವ್ಯ ಭಾರತ ನಿರ್ಮಾಣ ಮಾಡುವ ಶಕ್ತಿ ಮತದಾರನಲ್ಲಿದೆ. ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು. ಹೊಸ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಉತ್ತಮ ಆಡಳಿತ ವ್ಯವಸ್ಥೆ ರೂಪಿಸಲು ಮತದಾನ ಕಾರ್ಯವನ್ನು ಸಮರ್ಪಕ ರೀತಿಯಲ್ಲಿ ಮಾಡಿ ಸಶಕ್ತ ದೇಶ ನಿರ್ಮಾಣಕ್ಕೆ ಯುವಕರು ದೃಢ ಸಂಕಲ್ಪ ಮಾಡಬೇಕೆಂದು ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸುಶೀಲಾ, ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಕರ್ನಾಟಕ ವಿಶ್ವವಿದ್ಯಾಲಯ ಕುಲಸಚಿವ ಕೆ.ಟಿ. ಹನುಮಂತಪ್ಪ ಇದ್ದರು.

Edited By : Manjunath H D
Kshetra Samachara

Kshetra Samachara

25/01/2021 07:21 pm

Cinque Terre

51.55 K

Cinque Terre

2

ಸಂಬಂಧಿತ ಸುದ್ದಿ