ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಬಾಕಿ ವೇತನ ಬಿಡುಗಡೆ ಮಾಡಿ

ಧಾರವಾಡ: ವಿವಿಧ ಇಲಾಖೆಗಳಲ್ಲಿ ಹೊರಗುತ್ತಿಗೆ ಹಾಗೂ ಒಳಗುತ್ತಿಗೆಯಡಿ ಕೆಲಸ ಮಾಡುತ್ತಿರುವ ಎಲ್ಲ ಹಂತದ ನೌಕರರಿಗೆ ಬಾಕಿ ವೇತನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಮಹಾಮಂಡಲದ ನೇತೃತ್ವದಲ್ಲಿ ನೌಕರರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.

ಕಳೆದ ಎಂಟು-ಹತ್ತು ತಿಂಗಳಿನಿಂದ ನೌಕರರಿಗೆ ವೇತನವನ್ನು ಬಾಕಿ ಇರಿಸಿಕೊಳ್ಳಲಾಗಿದೆ. ಕೆಲವಡೆ 21 ತಿಂಗಳಿಂದ ವೇತನವನ್ನೇ ನೀಡಿಲ್ಲ. ಗುತ್ತಿಗೆ ನೌಕರರಿಗೂ ಕಾಯಂ ನೌಕರರಿಗೆ ನೀಡುವಷ್ಟೇ ವೇತನ ನೀಡಬೇಕು. ಅನೇಕ ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ನೌಕರರನ್ನೂ ಕಾಯಂ ನೌಕರರನ್ನಾಗಿ ನೇಮಕ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

Edited By : Manjunath H D
Kshetra Samachara

Kshetra Samachara

03/02/2021 01:02 pm

Cinque Terre

22.56 K

Cinque Terre

1

ಸಂಬಂಧಿತ ಸುದ್ದಿ