ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಸಧ್ಯ ನಡೆಸದಂತೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ನಡೆಸಲು ರಾಜ್ಯ ಸರಕಾರ ಅವಕಾಶ ಕೇಳಿದ ಹಿನ್ನೆಲೆಯಲ್ಲಿ ಹೈಕೋರ್ಟ್ ಎಂಟು ತಿಂಗಳಲ್ಲಿ ಚುನಾವಣೆ ನಡೆಸುವಂತೆ ಸರಕಾರಕ್ಕೆ ಸೂಚನೆ ನೀಡಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟಿನಲ್ಲಿ ಬಿಜಾಪುರದ ಮೂಲದ ವ್ಯಕ್ತಿಯೊಬ್ಬರು ರಾಜ್ಯದ ಹಲವು ಮಹಾನಗರ ಪಾಲಿಕೆಗಳಲ್ಲಿನ ವಾರ್ಡ್ ವಿಂಗಡನೆ. ಮೀಸಲಾತಿ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೇಟ್ಟಿಲೇರಿದ ಪರಿಣಾಮ ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ
ಅರ್ಜಿ ಪರಿಶೀಲನೆ ನಡೆಸಿದ ಸುಪ್ರೀಂಕೋರ್ಟ್ ಚುನಾವಣೆ ನಡೆಸದಂತೆ ತಡೆಯಾಜ್ಞೆ ನೀಡಿದೆ.
ಇದೀಗ ಮತ್ತೆ ಚುನಾವಣೆಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದ್ದು, ಇದರಿಂದ ಚುನಾವಣೆ ನಡೆಯುತ್ತದೆಯೇ ಎಂಬ ಪ್ರಶ್ನೆ ಮೂಡಿದೆ. ಮಹಾನಗರ ಪಾಲಿಕೆಯಲ್ಲಿ ಕಳೆದ ಮೂರು ವರ್ಷದಿಂದಲೂ ಚುನಾವಣೆ ಇಲ್ಲದೇ ಅಧಿಕಾರಿಗಳ ಮೇಲೆ ಆಡಳಿತ ನಡೆಯುತ್ತಿದೆ.
Kshetra Samachara
03/02/2021 11:02 pm