ಹುಬ್ಬಳ್ಳಿ:ಕೇಂದ್ರ ಸರ್ಕಾರ ದಿನದಿಂದ ದಿನಕ್ಕೆ ಪೆಟ್ರೋಲ್ ಡಿಸೇಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಸುತ್ತಿರುವುದು ಸಾರ್ವಜನಿಕ ಜನಜೀವನದ ಮೇಲೆ ಸಾಕಷ್ಟು ಹೊರೆ ಬಿಳುತ್ತಿದೆ.ಕೂಡಲೇ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ(ಸಿಲಿಂಡರ್) ಬೆಲೆ ಏರಿಕೆಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ಎಐಎಂಐಎಂ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.
ಕೇಂದ್ರ ಬಿಜೆಪಿ ಸರ್ಕಾರ ಗೃಹಬಳಕೆ ಅಡುಗೆ ಅನಿಲ,ಅಗತ್ಯ ವಸ್ತುಗಳ ಬೆಲೆಏರಿಕೆಯನ್ನು ಖಂಡಿಸಿ ತಹಶಿಲ್ದಾರ ಮೂಲಕ ಗೌರವಾನ್ವಿತ ರಾಷ್ಟ್ರಪತಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ದಿನದಿಂದ ದಿನಕ್ಕೆ ಇಂಧನ ಬೆಲೆ ಏರಿಕೆಯಾಗುತ್ತಿರುವುದು ನಿಜಕ್ಕೂ ದುರಾದೃಷ್ಟಕರ ಸಂಗತಿಯಾಗಿದೆ. ಜನ ಸಾಮಾನ್ಯರಿಗೆ ಇದರ ಹೊರೆ ಹೆಚ್ಚಾಗುತ್ತಿದೆ.ಕೇಂದ್ರ ಸರ್ಕಾರ ಜನಹಿತ ಕಾರ್ಯಗಳನ್ನು ಜಾರಿಗೊಳಿಸಬೇಕು ಹೊರತು ಈ ರೀತಿ ಬೆಲೆ ಏರಿಕೆ ಹೊರೆಯನ್ನು ಹೇರಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.
Kshetra Samachara
17/02/2021 06:08 pm