ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಘಟಗಿ:ಶಾಲಾ ಕಾಲೇಜಿಗೆ ತೆರಳದ ವಿದ್ಯಾರ್ಥಿಗಳು ಬಸ್ ಘಟಕಕ್ಕೆ ಬಂದರು

ಕಲಘಟಗಿ: ತಾಲೂಕಿನ ಗಂಭ್ಯಾಪೂರ ಗ್ರಾಮ ಸೇರಿದಂತೆ ವಿವಿಧ ಗ್ರಾಮಗಳಿಗೆ ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಕಲಘಟಗಿ ಪಟ್ಟಣದಲ್ಲಿನ ನೂತನ ಬಸ್ ಘಟಕಕ್ಕೆ ವಿದ್ಯಾರ್ಥಿಗಳು ಶುಕ್ರವಾರ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು.

ಕಲಘಟಗಿ ತಾಲೂಕಿನ ಗಂಭ್ಯಾಪೂರ,ಮುತ್ತಗಿ,ಎಮ್ಮೆಟ್ಟಿ,ಹುಲ್ಲಂಬಿ,ತುಮರಿಕೊಪ್ಪ ಗ್ರಾಮದ ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ಹೋಗಿ ಬರಲು ಬೆಳಿಗ್ಗೆ ಮತ್ತು ಸಾಯಂಕಾಲ ಸರಿಯಾಗಿ ಬಸ್ ವ್ಯವಸ್ಥೆ ಇಲ್ಲ.ಕಾರಣ ಬಸ್ ಬಿಡುವಂತೆ ವಿದ್ಯಾರ್ಥಿಗಳು ಒತ್ತಾಯಿಸಿ ಬಸ್ ಘಟಕದ ಎದುರುಮೂರು ಗಂಟೆಗೂ ಅಧಿಕ ಕಾಲ ಬಿಸಿಲಿನಲ್ಲಿಯೇ ಕುಳಿತು ಪ್ರತಿಭಟಿಸಿದರು.

ಈ ಹಿಂದೆಯೂ ಹಲವು ಬಾರಿ ಮನವಿ ನೀಡಿದರೂ ಬಸ್ ವ್ಯವಸ್ಥೆ ಕಲ್ಪಿಸಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

Edited By : Manjunath H D
Kshetra Samachara

Kshetra Samachara

19/02/2021 03:30 pm

Cinque Terre

24.21 K

Cinque Terre

0

ಸಂಬಂಧಿತ ಸುದ್ದಿ