ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ತಹಶೀಲ್ದಾರ ಗ್ರಾಮ ವ್ಯಾಸ್ತವ್ಯ ನಿರೀಕ್ಷೆ ಮೀರಿದ ಸಮಸ್ಯೆಗಳು

ಕುಂದಗೋಳ : ಗ್ರಾಮ ವಾಸ್ತವ್ಯದ ಮುಖ್ಯ ಉದ್ದೇಶ ಗ್ರಾಮೀಣ ಭಾಗದಲ್ಲಿ ಏನೇನು ? ಸಮಸ್ಯೆಗಳಿವೆ ಅವುಗಳನ್ನು ಮೊದಲೇ ಕೇಳಿ ನಂತರದ ಎಂಟು ದಿನಗಳ ಅವಧಿಯಲ್ಲಿ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಿ ಕೊಡುವುದಾಗಿದೆ ಎಂದು ತಹಶೀಲ್ದಾರ ಬಸವರಾಜ ಮೆಳವಂಕಿ ಹೇಳಿದರು.

ಅವರು ಗುಡೇನಕಟ್ಟಿ ಗ್ರಾಮದಲ್ಲಿ ನಡೆದ ತಹಶೀಲ್ದಾರ ಗ್ರಾಮ ವ್ಯಾಸ್ತವ್ಯದ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ ಜನರ ಸಮಸ್ಯೆಗಳಿಗೆ ಶೀಘ್ರವಾಗಿ ಪರಿಹಾರ ಸಿಗಲಿದೆ. ನಿಮ್ಮ ಗ್ರಾಮದ ಅಭಿವೃದ್ಧಿಯ ಕೆಲಸಗಳಿಗೆ ನಾವು ಕೈಜೊಡಿಸಲು ಸಿದ್ಧ ಎಂದರು.

ಈ ವೇಳೆ ಸಭೆಯಲ್ಲಿ ಭಾಗವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅನ್ನಪೂರ್ಣ ಸಂಗಳದ, ಸಹಾಯಕ ಕೃಷಿ ನಿರ್ದೇಶಕ ಸದಾಶಿವ ಕಾನೂರಿ, ಸಹಾಯಕ ತೋಟಗಾರಿಕೆ ನಿರ್ದೇಶಕ ಪರಶುರಾಮ ಹಲಕುರ್ಕಿ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎನ್.ಹಿರೇಮಠ, ತಾಲೂಕು ಪಂಚಾಯಿತಿ ಅಧಿಕಾರಿಗಳು ಭಾಗವಹಿಸಿ ತಮ್ಮ ಇಲಾಖೆಯ ರೂಪುರೇಷೆ ಸೌಲಭ್ಯಗಳ ಕುರಿತು ತಿಳಿಸಿದರು.

ಬಳಿಕ ತಹಶೀಲ್ದಾರ ಬಸವರಾಜ ಮೆಳವಂಕಿ ಅವರಿಗೆ ಗ್ರಾಮಸ್ಥರ ಅಹವಾಲು ಮನವಿ ಪತ್ರ ಸ್ವೀಕಾರದಲ್ಲಿ ನಿರೀಕ್ಷೆಗೂ ಮೀರಿ ಸಮಸ್ಯೆಗಳು ಕೇಳಿ ಬಂದವು.

ಈ ಸಂದರ್ಭದಲ್ಲಿ ತಾಲೂಕು ಆಡಳಿತದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನಪ್ಪ ಸೊರಟೂರ, ಸ್ಥಳೀಯ ತಾಲೂಕು ಪಂಚಾಯತ ಸದಸ್ಯೆ ಪುಷ್ಪಾ ಕಲಿವಾಳ. ನಾಲ್ಕು ಗ್ರಾಮಗಳ ಪಂಚಾಯಿತಿ ಸದಸ್ಯರು ಸಾರ್ವಜನಿಕರು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

20/02/2021 06:48 pm

Cinque Terre

20.1 K

Cinque Terre

2

ಸಂಬಂಧಿತ ಸುದ್ದಿ