ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ರಂಗಾಯಣ ಆಡಳಿತಾಧಿಕಾರಿಯಾಗಿ ಬಸವರಾಜ ಹೂಗಾರ ಅಧಿಕಾರ ಸ್ವೀಕಾರ

ಧಾರವಾಡ: ರಂಗಾಯಣದ ಆಡಳಿತಾಧಿಕಾರಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಹೂಗಾರ ಇಂದು ಅಧಿಕಾರ ವಹಿಸಿಕೊಂಡರು.

ಮೂಲತಃ ಬಾಗಲಕೋಟ ಜಿಲ್ಲೆಯ ಸೀಮೀಕೇರಿ ಗ್ರಾಮದವರಾದ ಇವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಕೊಪ್ಪಳ, ಮಂಡ್ಯ, ಬಾಗಲಕೋಟ, ಕಾರವಾರ, ಧಾರವಾಡ, ಹಾಗೂ ಬೆಂಗಳೂರು ಕೇಂದ್ರ ಕಚೇರಿಯಲ್ಲಿ ಉಪನಿರ್ದೇಶಕರಾಗಿ, ಕರ್ನಾಟಕ ಲಲಿತಾ ಕಲಾ ಅಕಾಡೆಮಿ ರಿಜಿಸ್ಟ್ರಾರ್ ಆಗಿ ಕಾರ್ಯನಿರ್ವಹಿಸಿ ಇದೀಗ ಜಂಟಿ ನಿರ್ದೇಶಕ ಹುದ್ದೆಗೆ ಬಡ್ತಿ ಪಡೆದು ಧಾರವಾಡ ರಂಗಾಯಣ ಆಡಳಿತಾಧಿಕಾರಿ ಹುದ್ದೆಗೆ ನಿಯೋಜಿಸಲ್ಪಟ್ಟಿದ್ದಾರೆ. ರಂಗಾಯಣ ನಿರ್ದೇಶಕ ರಮೇಶ ಪರವಿನಾಯ್ಕರ್, ರಂಗಸಮಾಜದ ಸದಸ್ಯ ಸಿದ್ಧರಾಮ ಹಿಪ್ಪರಗಿ, ಹೂಗಾರ್ ಅವರನ್ನು ಅಭಿನಂದಿಸಿ ಸ್ವಾಗತಿಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

30/07/2021 07:29 pm

Cinque Terre

26.07 K

Cinque Terre

0

ಸಂಬಂಧಿತ ಸುದ್ದಿ