ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಸಮುದಾಯ ಬಂಡವಾಳ ನಿಧಿಯ ಚೆಕ್ ಹಸ್ತಾಂತರ

ಧಾರವಾಡ: ಕೇಂದ್ರ ಸರ್ಕಾರದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ (ನರ್ಮ್) ಅಭಿಯಾನದಡಿ ಆರಂಭಿಸಿರುವ ಸಂಜೀವಿನಿ ಕಾರ್ಯಕ್ರಮವು ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಂಜೀವಿನಿಯಾಗಿದ್ದು, ಒಕ್ಕೂಟದ ಮಹಿಳಾ ಸದಸ್ಯರು ಸಮರ್ಪಕವಾಗಿ ಬಳಸಿಕೊಂಡು ಸ್ವಾವಲಂಭಿಯಾಗಿ ಅಭಿವೃದ್ಧಿ ಸಾಧಿಸಿಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸುಶೀಲಾ ಹೇಳಿದರು.

ಅವರು ಇಂದು ಧಾರವಾಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳಿಗೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ (ನರ್ಮ್) ಅಭಿಯಾನದಡಿ ಸಮುದಾಯ ಬಂಡವಾಳ ನಿಧಿಯ ಚೆಕ್‍ಗಳನ್ನು ವಿತರಿಸುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಭಿವೃದ್ಧಿಯಲ್ಲಿ ಮಹಿಳೆಯರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣವು ಪ್ರಮುಖ ಪಾತ್ರವನ್ನು ನಿರ್ವಹಿಸುತ್ತದೆ. ಸರ್ಕಾರವು ಮಹಿಳೆಯರ ಸಬಲೀಕರಣಕ್ಕಾಗಿ ವಿವಿಧ ಯೋಜನೆಗಳಲ್ಲಿ ಅವಕಾಶ ಕಲ್ಪಿಸಿದೆ. ಆದ್ದರಿಂದ ಮಹಿಳೆಯರು ತಮ್ಮ ಒಕ್ಕೂಟದ ಮೂಲಕ ಸಮುದಾಯ ಬಂಡವಾಳ ನಿಧಿಯನ್ನು ಅರ್ಹ ಮತ್ತು ಅವಶ್ಯವಿರುವ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಸಾಲವನ್ನು ವಿತರಿಸುವ ಮೂಲಕ ಒಂದು ಬ್ಯಾಂಕ್ ರೀತಿಯಲ್ಲಿ ಶಿಸ್ತು ಬದ್ಧವಾಗಿ ವ್ಯವಹರಿಸಬೇಕು ಮತ್ತು ಈ ಮೂಲಕ ಮಹಿಳೆಯರು ವಿವಿಧ ರೀತಿಯ ಆರ್ಥಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಪ್ರೋತ್ಸಾಹಿಸಬೇಕು ಎಂದು ಅವರು ಹೇಳಿದರು.

ಜಿಲ್ಲೆಯ 144 ಗ್ರಾಮ ಪಂಚಾಯತ್‍ಗಳ ಪೈಕಿ 130 ಗ್ರಾಮ ಪಂಚಾಯತ್‍ಗಳಲ್ಲಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳು ರಚನೆಯಾಗಿವೆ. ಇವುಗಳ ಪೈಕಿ 79 ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳಿಗೆ ಸಮುದಾಯ ಬಂಡವಾಳ ನಿಧಿ ಅನುದಾನ 1021.75 ಲಕ್ಷ ರೂಪಾಯಿಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಈ 79 ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟಗಳ ಪೈಕಿ ಹತ್ತು ಗ್ರಾಮ ಪಂಚಾಯತ್ ಒಕ್ಕೂಟಗಳಿಗೆ ಮಾತ್ರ ಶೇ.25 ರಷ್ಟು ಹಾಗೂ ಉಳಿದ ಒಕ್ಕೂಟಗಳಿಗೆ ಶೇ.50 ರಷ್ಟು ಅನುದಾನ ಬಿಡುಗಡೆಗೊಳಿಸಲಾಗಿದೆ. ಇವುಗಳಲ್ಲಿನ 33 ಗ್ರಾಮ ಪಂಚಾಯತ್ ಒಕ್ಕೂಟಗಳಿಗೆ ಶೇ.25 ರಷ್ಟು 2ನೇ ಕಂತಿನ ಅನುದಾನ 256 ಲಕ್ಷ ರೂಪಾಯಿಗಳ ಡಿಡಿಯನ್ನು ಇಂದು ವಿತರಿಸಲಾಗುತ್ತಿದೆ. ಇದರ ಸದುಪಯೋಗ ಮಾಡಿಕೊಂಡು ಒಕ್ಕೂಟಗಳು ತಾವೇ ಬ್ಯಾಂಕುಗಳಾಗಿ ತಮ್ಮ ಮಹಿಳಾ ಸ್ವಸಹಾಯ ಸಂಘಗಳಿಗೆ ಕನಿಷ್ಠ ದರದ ಬಡ್ಡಿಯಲ್ಲಿ ಸಾಲದ ನೆರವು ನೀಡಬೇಕೆಂದು ಡಾ.ಬಿ. ಸುಶೀಲಾ ತಿಳಿಸಿದರು.

Edited By : Nagesh Gaonkar
Kshetra Samachara

Kshetra Samachara

03/08/2021 08:26 pm

Cinque Terre

24.28 K

Cinque Terre

0

ಸಂಬಂಧಿತ ಸುದ್ದಿ