ಧಾರವಾಡ : ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿಂದು ಬೆಂಗಳೂರಿನ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ,ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ,ಪೊಲೀಸ್ ಇಲಾಖೆ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಧಾರವಾಡ ಸಾರ್ವಜನಿಕ ಶಿಕ್ಷಣ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಕ್ಕಳ ಪಾಲನಾ ಸಂಸ್ಥೆಗಳ ಸಂಯುಕ್ತಾಶ್ರಯಲ್ಲಿ ಬಾಲನ್ಯಾಯ ಕಾಯ್ದೆ 2015 ರ ಅನುಷ್ಠಾನ ಪೊಕ್ಸೊ ಕಾಯ್ದೆ 2012 ಬಾಲ ವಿವಾಹ ನಿಷೇಧ ಕಾಯ್ದೆ ಹಾಗೂ ಆರ್‌ಟಿ.ಇ ಕಾಯ್ದೆ 2009 ರ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ಸಬ್ಯಾಸ್ಟಿನ್ ಆ್ಯಂಥೋನಿ,ಜಿಲ್ಲಾಧಿಕಾರಿ ನಿತೀಶ್ ಪಾಟೀಲ, ಸಿಇಓ ಡಾ.ಬಿ.ಸುಶೀಲಾ,ಸೇರಿದಂತೆ ಸಂಭಂದಿಸಿದ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
10/08/2021 12:54 pm