ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಆಗಸ್ಟ್ 20ರಂದು ಮೊಹರಂ ಹಬ್ಬದ ಆಚರಣೆ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಇಂದು (ಆ.18) ಸಂಜೆ 6 ಗಂಟೆಯಿಂದ ಆ.21ರ ಬೆಳಗಿನ 6 ಗಂಟೆಯವರೆಗೆ ಮದ್ಯಪಾನ, ಮದ್ಯ ಮಾರಾಟ ಹಾಗೂ ಸಾಗಾಣಿಕೆ ನಿಷೇಧಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಗ್ರಾಮೀಣ ಪ್ರದೇಶಗಳ ಭಾರತೀಯ ತಯಾರಿಕೆ ಮದ್ಯದ ಅಂಗಡಿಗಳು, ಬಿಯರ್ ಬಾರ್‌ಗಳು, ಕ್ಲಬ್‌ಗಳು ಮತ್ತು ಮದ್ಯದ ಡಿಪೊಗಳು ಈ ನಿಷೇಧಾಜ್ಞೆ ಅವಧಿಯಲ್ಲಿ ಮುಚ್ಚಿರಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
Kshetra Samachara
18/08/2021 09:46 pm