ಧಾರವಾಡ: ಸಾರ್ವಜನಿಕ ಶಿಕ್ಷಣ ಇಲಾಖೆ ಹೆಚ್ಚುವರಿ ಆಯುಕ್ತರಾಗಿದ್ದ ಮೇಜರ್ ಸಿದ್ಧಲಿಂಗಯ್ಯ ಹಿರೇಮಠ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಸಿದ್ಧಲಿಂಗಯ್ಯ ಅವರಿಂದ ತೆರವಾದ ಸ್ಥಾನಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆಯ ನೂತನ ಹೆಚ್ಚುವರಿ ಆಯುಕ್ತರನ್ನಾಗಿ ಕೆಎಎಸ್ ಶ್ರೇಣಿಯ ಸಿದ್ರಾಮಪ್ಪ ಶ್ರೀಶೈಲ ಬಿರಾದಾರ ಅವರನ್ನು ಸರ್ಕಾರ ನೇಮಕ ಮಾಡಿದೆ.
ಮೇಜರ್ ಸಿದ್ಧಲಿಂಗಯ್ಯ ಹಿರೇಮಠ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರನ್ನಾಗಿ ನಿಯುಕ್ತಿಗೊಳಿಸಲಾಗಿದೆ.
Kshetra Samachara
12/10/2021 04:08 pm