ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗ್ರಾಮೀಣ ಜನರ ಮನೆ ಬಾಗಿಲಿಗೆ ಸರ್ಕಾರಿ ಸೇವೆ ನೀಡಲು ಸಿದ್ಧತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಧಾರವಾಡ: ಸರ್ಕಾರದ ಯೋಜನೆಗಳನ್ನು ಅರ್ಹರಿಗೆ ತಲುಪಿಸಿ, ಸಫಲಗೊಳಿಸಲು ಜಿಲ್ಲಾಡಳಿತ ದಿಟ್ಟ ಕ್ರಮಗಳನ್ನು ಕೈಗೊಂಡಿದೆ. ಗ್ರಾಮೀಣ ಜನರ ಮನೆ ಬಾಗಿಲಿಗೆ ಸರ್ಕಾರಿ ಸೇವೆಗಳನ್ನು ತಲುಪಿಸಲು ಜಿಲ್ಲಾಡಳಿತ ಕ್ರಮ ವಹಿಸಿದ್ದು, ಗ್ರಾಮಲೆಕ್ಕಾಧಿಕಾರಿ ಮತ್ತು ಗ್ರಾಮ ಸಹಾಯಕ ಮನೆ ಮನೆಗೆ ಭೇಟಿ ನೀಡಿ, ಫಲಾನುಭವಿಗಳಿಗೆ ಸೌಲಭ್ಯ ತಲುಪಿಸುತ್ತಿದ್ದಾರೆ ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು.

ಧಾರವಾಡ ತಾಲೂಕಿನ ವನಹಳ್ಳಿ ಗ್ರಾಮದಲ್ಲಿ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತದಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ಅಂಗವಾಗಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ. ಕಾರ್ಯಕ್ರಮ ಅಂಗವಾಗಿ ಪ್ರತಿ ತಾಲೂಕಿನಲ್ಲಿ ತಹಶೀಲ್ದಾರಗಳು ಕಂದಾಯ ಸಿಬ್ಬಂದಿ ಮೂಲಕ ಮನೆ ಮನೆ ಸರ್ವೆ ಮಾಡಿಸಿ, ಸಮಸ್ಯೆಗಳ ಕುರಿತು ಅರ್ಜಿ ಸಂಗ್ರಹಿಸುತ್ತಾರೆ. ನಂತರ ಆಯಾ ಇಲಾಖೆಗೆ ಅರ್ಜಿ ರವಾನಿಸಿ, ಪರಿಶೀಲಿಸಿ ನಿಯಮಾನುಸಾರ ವಿಲೇವಾರಿ ಮಾಡುತ್ತಾರೆ.

ವನಹಳ್ಳಿ ಗ್ರಾಮ ವಾಸ್ತವ್ಯ ಹಿನ್ನೆಲೆಯಲ್ಲಿ ಕನಕೂರ ಗ್ರಾಮ ಪಂಚಾಯತ ವ್ಯಾಪ್ತಿಯ ಕವಲಗೇರಿ, ಚಂದನಮಟ್ಟಿ, ಕನಕೂರ, ತಲವಾಯಿ ಮತ್ತು ವನಹಳ್ಳಿ ಗ್ರಾಮದ ಮನೆಮನೆಗೆ ಭೇಟಿ ನೀಡಿ, ಸಾರ್ವಜನಿಕರ ಅಹವಾಲು ಸ್ವೀಕರಿಸಲಾಗಿತ್ತು. ಐದು ಗ್ರಾಮಗಳಿಂದ ವೈಯಕ್ತಿಕ ಹಾಗೂ ಸಾಮುದಾಯಿಕವಾದ ಸುಮಾರು 140 ಅರ್ಜಿಗಳು ಸ್ವೀಕೃತವಾಗಿದ್ದವು. ಅವುಗಳನ್ನು ನಿಯಮಾನುಸಾರ ಇತ್ಯರ್ಥಗೊಳಿಸಲಾಗಿದೆ.

ಇಂದು ಸಹ ಸಾರ್ವಜನಿಕರ ಹವಾಲು ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಎರಡು ಕೌಂಟರ್‌ಗಳನ್ನು ತೆರೆಯಬೇಕಾಗಿದೆ. ಮಧ್ಯಾಹ್ನದವರೆಗೆ ಇಂದು ಸಹ 100 ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದ್ದು, ನಿಯಮಾನುಸಾರ ಸ್ಥಳದಲ್ಲಿಯೇ ಪರಿಹರಿಸಲು ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದರು.

ಅಧಿಕಾರಿಗಳು ಜನರ ಸಮಸ್ಯೆಗಳನ್ನು ಆಲಿಸಲು ಹಳ್ಳಿಗೆ ಹೋಗಬೇಕು ಮತ್ತು ಸಾಧ್ಯವಾದರೆ ಸ್ಥಳದಲ್ಲಿಯೇ ಸಮಸ್ಯೆ ಇತ್ಯರ್ಥ ಪಡಿಸಬೇಕು ಎಂಬುದು ಸರ್ಕಾರದ ಆಶಯವಾಗಿದ್ದು, ಧಾರವಾಡ ಜಿಲ್ಲಾಡಳಿತವು ಪ್ರತಿ ತಹಶೀಲ್ದಾರ ಮತ್ತು ಕಂದಾಯ ನಿರೀಕ್ಷಕರು ಪ್ರತಿ ವಾರ ಗ್ರಾಮ ಭೇಟಿ ನೀಡಿ, ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಪರಿಹರಿಸಿದ ವರದಿ ನೀಡುವಂತೆ ನಿರ್ದೇಶಿಸಲಾಗಿದೆ. ಎಸಿ ಅವರ ಮೂಲಕ ಜಿಲ್ಲಾಡಳಿತ ಈ ಕುರಿತು ಮೇಲ್ವಿಚಾರಣೆಯನ್ನು ಮಾಡುತ್ತಿದೆ ಎಂದರು.

ಗ್ರಾಮಸ್ಥರ ಪ್ರೀತಿ, ವಿಶ್ವಾಸದಿಂದ ಗ್ರಾಮ ವಾಸ್ತವ್ಯ ಕಾರ್ಯಕ್ರಮಗಳು ಅಧಿಕಾರಿಗಳ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸುತ್ತಿವೆ. ಗ್ರಾಮಗಳೇ ಜನರ ಜೀವಾಳ. ಇಲ್ಲಿನ ಅಭಿವೃದ್ದಿ, ಸೌಹರ್ಧತೆ ಮುಖ್ಯವಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಉಪವಿಭಾಗಾಧಿಕಾರಿ ಡಾ.ಗೋಪಾಲಕೃಷ್ಣ ಬಿ., ಪ್ರಾಸ್ತಾವಿಕವಾಗಿ ಮಾತನಾಡಿದರು.

ತಹಶೀಲ್ದಾರ ಸಂತೋಷ ಬಿರಾದಾರ ಸ್ವಾಗತಿಸಿದರು.

ಶಿಕ್ಷಕಿ ಎ.ಎಸ್.ಹಿರೆಗೌಡ್ರ ಕಾರ್ಯಕ್ರಮ ನಿರೂಪಿಸಿದರು.

Edited By : PublicNext Desk
Kshetra Samachara

Kshetra Samachara

16/10/2021 03:31 pm

Cinque Terre

5.12 K

Cinque Terre

0

ಸಂಬಂಧಿತ ಸುದ್ದಿ