ಧಾರವಾಡ: ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮ ಪಂಚಾಯ್ತಿಗೆ ನಿಯುಕ್ತಿಗೊಂಡಿದ್ದ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ವಿ.ಕೆ.ಗಣಾಚಾರಿ ಎಂಬುವವರು ಪಂಚಾಯ್ತಿಗೆ ಹೋಗಿ ಕರ್ತವ್ಯಕ್ಕೆ ಹಾಜರಾಗದೇ ಮೇಲಾಧಿಕಾರಿಗಳ ಆದೇಶ ಉಲ್ಲಂಘಿಸಿದ ಆರೋಪದ ಮೇಲೆ ಇದೀಗ ಪಿಡಿಓ ಗಣಾಚಾರಿ ಅವರನ್ನು ಅಮಾನತ್ತುಗೊಳಿಸಿ ಜಿಲ್ಲಾ ಪಂಚಾಯ್ತಿ ಸಿಇಓ ಅವರು ಆದೇಶ ಹೊರಡಿಸಿದ್ದಾರೆ.
ಚಿಕ್ಕಮಲ್ಲಿಗವಾಡ ಗ್ರಾಮ ಪಂಚಾಯ್ತಿ ಪಿಡಿಓ ಆಗಿ ವಿ.ಕೆ.ಗಣಾಚಾರಿ ಅವರನ್ನು ನೇಮಕ ಮಾಡಲಾಗಿತ್ತು. ಆದರೆ, ಅವರು ಅಧಿಕಾರ ಸ್ವೀಕರಿಸದೇ ಇದ್ದದ್ದರಿಂದ ಮೇಲಾಧಿಕಾರಿಗಳ ಆದೇಶ ಉಲ್ಲಂಘನೆ, ಕರ್ನಾಟಕ ನಾಗರಿಕ ಸೇವಾ ನಿಯಮಗಳ 1966ರ ನಿಯಮ 1ನೇದ್ದನ್ನು ಪೂರ್ಣ ಉಲ್ಲಂಘಿಸಿ ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಆರೋಪದ ಮೇಲೆ ಇದೀಗ ಗಣಾಚಾರಿ ಅವರನ್ನು ಅಮಾನತ್ತುಗೊಳಿಸಲಾಗಿದೆ.
Kshetra Samachara
26/10/2021 08:34 pm