ಧಾರವಾಡ: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಪ್ರತಿವರ್ಷ ವಿವಿಧ ಕ್ಷೇತ್ರಗಳ ಸಾಧನೆ ಮಾಡಿದವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತದೆ.
ಪ್ರಸಕ್ತ ವರ್ಷ ಕನ್ನಡದ ಮೇರು ನಟ ಪುನೀತ್ ರಾಜಕುಮಾರ್ ಅವರ ನಿಧನದ ಹಿನ್ನೆಲೆಯಲ್ಲಿ ಪ್ರಶಸ್ತಿಗೆ ಅರ್ಹರನ್ನು ಕೊಂಚ ತಡವಾಗಿ ಆಯ್ಕೆ ಮಾಡಲಾಗಿದೆ. ರಾಜ್ಯದ 66 ಜನರಿಗೆ ಪ್ರಸಕ್ತ ವರ್ಷ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ. ಅದರಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಧಾರವಾಡದ ಮೂವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ.
ಜಾನಪದ ಕ್ಷೇತ್ರದಲ್ಲಿ ಸಾಧನೆ ಮಾಡಿದ ವೆಂಕಪ್ಪ ಗೋವಿಂದಪ್ಪ ಭಜಂತ್ರಿ, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಡಾ.ಶಿವನಗೌಡ ರುದ್ರಗೌಡ ರಾಮನಗೌಡರ (ಡಾ.ಎಸ್.ಆರ್.ರಾಮನಗೌಡರ), ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ಡಾ.ವೇದವ್ಯಾಸ ದೇಶಪಾಂಡೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಶ್ರೀಧರ ಚಕ್ರವರ್ತಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
Kshetra Samachara
31/10/2021 05:59 pm